ಬೆಂಗಳೂರು: ಗದಗ ಜಿಲ್ಲೆಯ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮವನ್ನಾಗಿ ಘೋಷಿಸದಂತೆ ಒತ್ತಾಯಿಸಿ ಜಿಲ್ಲೆಯ ದಲಿತ, ಅಲ್ಪಸಂಖ್ಯಾತ ಮತ್ತು ಕುರುಬ ಸಮುದಾಯದ ಜನರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರದಲ್ಲಿ ಶುಕ್ರವಾರ ಮನವಿ ಸಲ್ಲಿಸಿತು.

ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ ಅಖಿಲ ಭಾರತ ಬಂಜಾರ ಸೇವಾ ಸಂಘದ ಗದಗ ತಾಲ್ಲೂಕು ಘಟಕದ ಅಧ್ಯಕ್ಷ ಮೋತಿಲಾಲ ಚನ್ನಪ್ಪ ಮಾಳಗಿಮನಿ, `ಶಿರಹಟ್ಟಿ, ಮುಂಡರಗಿ ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಬರದ ಸ್ಥಿತಿ ಇದೆ. ಈ ಭಾಗದ ಜನರು ತಮ್ಮ ಜಾನುವಾರುಗಳ ಮೇವಿಗೆ ಕಪ್ಪತ್ತಗುಡ್ಡದಲ್ಲಿ ಬೆಳೆಯುವ ಹುಲ್ಲನ್ನು ಅವಲಂಬಿಸಿದ್ದಾರೆ. ಸರ್ಕಾರ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮವನ್ನಾಗಿ ಘೋಷಿಸಿದರೆ ಸ್ಥಳೀಯರಿಗೆ ತೊಂದರೆಯಾಗಲಿದೆ' ಎಂದು ಅಳಲು ತೋಡಿಕೊಂಡರು.

`ಕಪ್ಪತ್ತಗುಡ್ಡದಲ್ಲಿ ವನ್ಯಜೀವಿಗಳೇ ಇಲ್ಲ. ಆದರೂ ಕೆಲ ಡೋಂಗಿ ಪರಿಸರವಾದಿಗಳು ರಾಜಕೀಯ ಉದ್ದೇಶಕ್ಕಾಗಿ ಈ ಪ್ರದೇಶವನ್ನು ವನ್ಯಜೀವಿ ಧಾಮ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಆ ಮೂಲಕ ಈ ಭಾಗದಲ್ಲಿರುವ ಲಂಬಾಣಿ, ಕುರುಬ, ದಲಿತ ಸಮುದಾಯದ ಜನರನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ' ಎಂದು ಅವರು ದೂರಿದರು.

ಸ್ಥಳೀಯರ ಬದುಕಿಗೆ ಆಸರೆಯಾಗಿರುವ ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮವನ್ನಾಗಿ ಘೋಷಿಸಿದರೆ ವಿಧಾನಸೌಧದ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತೇವೆ ಎಂದು ಗದಗ ಜಿಲ್ಲಾ ಬಂಜಾರ ರೈತ ವೇದಿಕೆ ಸಂಚಾಲಕ ಸಿ.ಲಕ್ಷ್ಮಣ ಹೇಳಿದರು.

`ಹಿಂದುಳಿದ ವರ್ಗದವರಿಗೆ ಹಾಗೂ ದಲಿತರಿಗೆ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ. ಕಪ್ಪತ್ತಗುಡ್ಡವನ್ನು ವನ್ಯಜೀವಿ ಧಾಮವನ್ನಾಗಿ ಮಾಡುವ ಪ್ರಸ್ತಾವವನ್ನು ಅಂಗೀಕರಿಸುವುದಿಲ್ಲ. ಈ ಸಂಬಂಧ ಅರಣ್ಯ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸುತ್ತೇನೆ' ಎಂದು ಸಿದ್ದರಾಮಯ್ಯ ನಿಯೋಗಕ್ಕೆ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.