ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂದಲಹಳ್ಳಿ: ಸರ್ವೀಸ್‌ ರಸ್ತೆ ವಿಸ್ತರಣೆಗೆ ಸೂಚನೆ

ವಿವಿಧ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ ಮೇಯರ್‌ ಗಂಗಾಂಬಿಕೆ
Last Updated 12 ಜೂನ್ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು: ಕುಂದಲಹಳ್ಳಿ ಜಂಕ್ಷನ್‌ ಬಳಿ 10 ಮೀಟರ್‌ ಅಗಲದ ಸರ್ವಿಸ್‌ ರಸ್ತೆ ಅಭಿವೃದ್ಧಿ ಪಡಿಸಿ ಎಂದು ಮೇಯರ್‌ ಗಂಗಾಂಬಿಕೆ ಅಧಿಕಾರಿಗಳಿಗೆ ಬುಧವಾರ ಸೂಚಿಸಿದರು.

ನಗರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ‘ಕುಂದಲಹಳ್ಳಿಯಲ್ಲಿ ಮೊದಲು 5 ಮೀಟರ್‌ ಅಗಲದಲ್ಲಿ ಸರ್ವಿಸ್‌ ರಸ್ತೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿತ್ತು. ಸಂಚಾರದಟ್ಟಣೆ ಹೆಚ್ಚಾಗಿರುವ ಕಾರಣ, ಮತ್ತೆ 5 ಮೀಟರ್‌ ಜಾಗವನ್ನು ಹೆಚ್ಚುವರಿಯಾಗಿ ವಶಪಡಿಸಿಕೊಂಡು ರಸ್ತೆ ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ, ಕುಂದಲಹಳ್ಳಿ ಜಂಕ್ಷನ್‌ ಬಳಿ ಕೈಗೊಳ್ಳಲಾಗಿರುವ ಸಿಗ್ನಲ್‌ ಮುಕ್ತ ಕಾರಿಡಾರ್‌ ಯೋಜನೆಯ ಪ್ರಗತಿ ಪರಿಶೀಲಿಸಿದರು. ಈ ಯೋಜನೆಯು 17.5 ಕಿ.ಮೀ. ರಸ್ತೆ ಅಭಿವೃದ್ಧಿಯ ಜೊತೆಗೆ, ಫುಟ್‌ಪಾತ್‌, ಚರಂಡಿ ಮತ್ತು ಅಡ್ಡರಸ್ತೆಗಳ ಅಭಿವೃದ್ಧಿಯ ಜೊತೆಗೆ ಮೂರು ಜಂಕ್ಷನ್‌ಗಳ ಅಭಿವೃದ್ಧಿಯನ್ನೂ ಒಳಗೊಂಡಿದೆ.

ಅಲ್ಲದೆ, ಕುಂದಲಹಳ್ಳಿ ಜಂಕ್ಷನ್‌ ಹಾಗೂಸುರಂಜನ್ ದಾಸ್ ಜಂಕ್ಷನ್ ಬಳಿ ಕೈಗೊಳ್ಳಲಾಗುತ್ತಿರುವ ಕೆಳಸೇತುವೆ ಕಾಮಗಾರಿಯನ್ನೂ ಮೇಯರ್‌ ಪರಿಶೀಲಿಸಿದರು. ಇದಾದ ನಂತರ, ವಿಂಡ್‌ ಟನಲ್‌ ಜಂಕ್ಷನ್‌ ಬಳಿ ನಿರ್ಮಿಸುತ್ತಿರುವ ಕೆಳಸೇತುವೆ ಕಾಮಗಾರಿ ವೀಕ್ಷಿಸಿದ ಅವರು, ಶೀಘ್ರವಾಗಿ ಕೇಬಲ್‌ ಬದಲಿಸಿ, ಕಾಮಗಾರಿ ಚುರುಕುಗೊಳಿಸಲು ಸೂಚಿಸಿದರು.ಈ ಎಲ್ಲ ಕಾಮಗಾರಿಗಳನ್ನು ನವೆಂಬರ್‌ ಒಳಗಾಗಿ ಪೂರ್ಣಗೊಳಿಸುವಂತೆ ಮೇಯರ್‌ ಆದೇಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT