ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂಬಳಗೋಡು ಸರ್ಕಾರಿ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಚಾಲನೆ

Last Updated 20 ಅಕ್ಟೋಬರ್ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು:  ನಗರದ ಕುಂಬಳಗೋಡು ಗ್ರಾಮದಲ್ಲಿ ₹1.5 ಕೋಟಿ ವೆಚ್ಚದ ನೂತನ ಆಸ್ಪತ್ರೆ ಕಟ್ಟಡದ ಕಾಮಗಾರಿಗೆ ಶಾಸಕ ಎಸ್.ಟಿ.ಸೋಮಶೇಖರ್ ಗುರುವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶದನಾಗರಿಕರ ಆರೋಗ್ಯ ಸುಧಾರಣೆ ಹಾಗೂ ಉತ್ತಮ ಚಿಕಿತ್ಸಾಸೌಲಭ್ಯ ಒದಗಿಸುವ ಉದ್ದೇಶ
ದಿಂದ ಆಸ್ಪತ್ರೆಯನ್ನುನಿರ್ಮಿಸಲಾಗುತ್ತಿದೆ’ ಎಂದರು.

ಕುಂಬಳಗೋಡು ಗ್ರಾಮ ಪಂಚಾಯ್ತಿ ಅಧ್ಯಕ್ಷ ಚಿಕ್ಕರಾಜು ಮಾತನಾಡಿ, ‘ಆಸ್ಪತ್ರೆ ನಿರ್ಮಾಣ ಕಾಮಗಾರಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಇಲ್ಲಿನ ಜನರು ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣ ನೀಡಿ ಚಿಕಿತ್ಸೆ ಪಡೆಯುತ್ತಿದ್ದರು. ಸರ್ಕಾರಿ ಆಸ್ಪತ್ರೆ ಸ್ಥಾಪನೆಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT