ಬೆಂಗಳೂರು:  ರಾಜ್ಯದಲ್ಲಿ 1998, 1999 ಹಾಗೂ 2004ರಲ್ಲಿ ನಡೆಸಿದ ಕೆಎಎಸ್ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತಂತೆ ಸಿಐಡಿ ತಯಾರಿಸಿರುವ ವರದಿಯನ್ನು ರಾಜ್ಯ ಸರ್ಕಾರ ತಕ್ಷಣವೇ ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ರಾಜ್ಯ ಪ್ರಜಾ ವಿಮೋಚನಾ ಸಮಿತಿ ಹಾಗೂ ಕೆಎಎಸ್ ಅಭ್ಯರ್ಥಿಗಳ ಹಿತರಕ್ಷಣಾ ವೇದಿಕೆ ಆಗ್ರಹಿಸಿವೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು, ಮೂರು ವರ್ಷಗಳಲ್ಲಿ ನಡೆದ ನೇಮಕಾತಿಯಿಂದ ಉದ್ಯೋಗ ಪಡೆದಿರುವವರನ್ನು ವಜಾಗೊಳಿಸಿ ಅನ್ಯಾಯವಾಗಿರುವ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸಬೇಕು ಎಂದು ಒತ್ತಾಯಿಸಿದರು.

`ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದ್ದರು, ಆದರೆ ಕೆಪಿಎಸ್ಸಿ ಅಕ್ರಮಗಳಲ್ಲಿ ಭಾಗಿಯಾದ ಸಂಸ್ಥೆಯ ಸದಸ್ಯರ ಪರ ನಿಂತಿರುವುದು ಸರಿಯಲ್ಲ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.