ನೆಲಮಂಗಲ: ‘ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿರುವುದರಿಂದ ಕಾರ್ಯಕರ್ತರಾಗಲೀ, ಮುಖಂಡರಾಗಲೀ ಎದೆಗುಂದುವ ಅವಶ್ಯಕತೆಯಿಲ್ಲ. ನಾನು ಸದಾ ನಿಮ್ಮೊಂದಿಗಿರುತ್ತೇನೆ’ ಎಂದು ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮಾಜಿ ಮೇಯರ್ ಆರ್.ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ಬಸವಣ್ಣದೇವರ ಮಠದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ‘ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ನಾನು ಕ್ಷೇತ್ರಕ್ಕೆ ಹೊಸಬ ಎಂದು ಪ್ರತಿಪಕ್ಷಗಳ ಮುಖಂಡರು ಅಪಪ್ರಚಾರ ಮಾಡಿದ್ದರು. ಕಾರ್ಯಕರ್ತರ ಪರಿಶ್ರಮದಿಂದ 45 ಸಾವಿರ ಮತಗಳನ್ನು ಪಡೆಯುವ ಮೂಲಕ ಅವರಿಗೆ ತಕ್ಕ ಉತ್ತರ ನೀಡಲಾಗಿದೆ’ ಎಂದರು.

‘ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಪಡಿಸಿ ಮುಂಬರುವ ಪುರಸಭೆ, ಲೋಕಸಭಾ ಚುನಾವಣೆಗಳನ್ನು ಗೆಲ್ಲುವುದು ನಮ್ಮ ಧ್ಯೇಯ‘ ಎಂದು ಕಾರ್ಯಕರ್ತರನ್ನು ಹುರಿದುಂಬಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.