ಬೆಂಗಳೂರು: `ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪತ್ರಕರ್ತರು ಹೆಚ್ಚು ಲೇಖನಗಳನ್ನು ಬರೆಯಬೇಕು~ ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೃಷ್ಣ ಸಲಹೆ ನೀಡಿದರು.

ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಡಿ. ಮಹಾದೇವಪ್ಪ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

`ಕೃಷಿ ಸಾಲ ಹಾಗೂ ಬೆಳೆ ಹಾನಿ ಮಾತ್ರ ರೈತರ ಆತ್ಮಹತ್ಯೆಗೆ ಕಾರಣ ಅಲ್ಲ. ಮದುವೆ ಸೇರಿದಂತೆ ಆಡಂಬರದ ಕಾರ್ಯಕ್ರಮಗಳಿಗೆ ಸಾಲ ಮಾಡುವ ಪ್ರವೃತ್ತಿ ರೈತರಲ್ಲಿ ಹೆಚ್ಚುತ್ತಿದೆ. ಬಳಿಕ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪತ್ರಕರ್ತರ ಲೇಖನಗಳು ರೈತರಲ್ಲಿ ಜಾಗೃತಿ ಮೂಡಿಸಬೇಕು~ ಎಂದರು.

ಡೆಕ್ಕನ್ಹೆರಾಲ್ಡ್ ಪತ್ರಿಕೆಯ ಹಿರಿಯ ವರದಿಗಾರ ಬಿ.ಆರ್. ರೋಹಿತ್ ಅಧ್ಯಕ್ಷತೆ ವಹಿಸಿದ್ದರು. ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಎಸ್.ವಿ.ಜಯಶೀಲ ರಾವ್, ಖಾದ್ರಿ ಶಾಮಣ್ಣ ಟ್ರಸ್ಟ್ ಅಧ್ಯಕ್ಷೆ ವಿಜಯಾ ನಾರಾಯಣ್, ಸುಮನಾ ಖಾದ್ರಿ ಶಾಮಣ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.