ಬೆಂಗಳೂರು: ಮೂತ್ರಪಿಂಡ ಸಮಸ್ಯೆಯಿರುವ ರೋಗಿಗಳಿಗೆ ಉಚಿತವಾಗಿ ಡಯಾಲಿಸಿಸ್ ಸೇವೆ ಒದಗಿಸಲು ಮುಂದೆ ಬರುವ ನಗರದ ಖಾಸಗಿ ಆಸ್ಪತ್ರೆಗಳಿಗೆ ಡಯಾಲಿಸಿಸ್ ಯಂತ್ರಗಳನ್ನು ಕೊಡುಗೆಯಾಗಿ ನೀಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮುಂದಾಗಿದೆ.

ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ವಿವರ ಸಲ್ಲಿಸುವಂತೆ ಬಿಡಿಎ
ವ್ಯಾಪ್ತಿಯ ಎಲ್ಲಾ ಕಾರ್ಯಪಾಲಕ ಎಂಜಿನಿಯರ್ಗಳಿಗೆ ಸೂಚಿಸಲಾಗಿದೆ. ಈ ಸಂಬಂಧ ಬಿಡಿಎ ಆಯುಕ್ತರು ಫೆಬ್ರುವರಿ 21ರಂದು ಎಲ್ಲಾ ಎಂಜಿನಿಯರ್ಗಳಿಗೂ ಟಿಪ್ಪಣಿ ಕಳಿಸಿದ್ದಾರೆ.

‘ಸಾಮಾಜಿಕ ಕಳಕಳಿಯ ಕಾರ್ಯಗಳನ್ನು ಮಾಡಲು ಬಿಡಿಎ ನಿಯಮಗಳಲ್ಲಿ ಅವಕಾಶವಿದೆ. ಈ ಹಿಂದೆ ಅನೇಕ ಸಂಸ್ಥೆಗಳಿಗೆ ಬಿಡಿಎ ವತಿಯಿಂದ ಕೊಡುಗೆ ನೀಡಲಾಗಿದೆ. ಈ ಬಾರಿ ಆಸ್ಪತ್ರೆಗಳಿಗೆ ಕೊಡುಗೆ ನೀಡಲು ಉದ್ದೇಶಿಸಲಾಗಿದೆ. ಆಯ್ದ ಖಾಸಗಿ ಆಸ್ಪತ್ರೆಗಳಿಗೆ ತಲಾ ಎರಡು ಡಯಾಲಿಸಿಸ್ ಯಂತ್ರಗಳನ್ನು ನೀಡುವ ಚಿಂತನೆ ಇದೆ’ ಎಂದು ಬಿಡಿಎ ಆಯುಕ್ತ ಟಿ.ಶ್ಯಾಮ್ಭಟ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಈ ಹಿಂದೆ ಬೌರಿಂಗ್ ಆಸ್ಪತ್ರೆ, ಜಯದೇವ ಹೃದ್ರೋಗ ಸಂಸ್ಥೆ ಹಾಗೂ ಕಿದ್ವಾಯಿ ಆಸ್ಪತ್ರೆಗೆ ಕಟ್ಟಡ ನಿರ್ಮಾಣ ಹಾಗೂ ವೈದ್ಯಕೀಯ ಸಲಕರಣೆಗಳ ಖರೀದಿಗಾಗಿ ಪ್ರಾಧಿಕಾರದ ವತಿಯಿಂದ ಆರ್ಥಿಕ ನೆರವು ನೀಡ
ಲಾಗಿತ್ತು. ಇದಲ್ಲದೆ ಭಿಕ್ಷುಕರ ಪುನರ್ವಸತಿ ಕೇಂದ್ರದ ಉಪಕರಣಗಳ ಖರೀದಿಗೆ ಆರ್ಥಿಕ ಸಹಾಯ ಮಾಡಲಾಗಿತ್ತು’ ಎಂದು ಅವರು ಹೇಳಿದರು.

‘ಯಾವ ಆಸ್ಪತ್ರೆಗಳಿಗೆ ಯಂತ್ರಗಳನ್ನು ವಿತರಿಸಬೇಕು, ಯಾವ ಕಂಪೆನಿಯಿಂದ ಯಂತ್ರಗಳನ್ನು ಖರೀದಿಸಬೇಕು ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಈ ಯೋಜನೆ ಇನ್ನೂ ಪ್ರಸ್ತಾವದ ಹಂತದಲ್ಲಿದೆ. ಕಾರ್ಯಪಾಲಕ ಎಂಜಿನಿಯರ್ಗಳು ವಿವರ ನೀಡಿದ ನಂತರ ಯೋಜನೆಗೆ ಆಸ್ಪತ್ರೆಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಬಿಡಿಎ ಮಂಡಳಿ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಅವರು ವಿವರಿಸಿದರು.

ಉಚಿತ ಸೇವೆಯೇ ಮಾನದಂಡ
ಯಾವ ಆಸ್ಪತ್ರೆಗಳು ಉಚಿತವಾಗಿ ಡಯಾಲಿಸಿಸ್ ಸೇವೆ ನೀಡಲು ಒಪ್ಪತ್ತವೆಯೊ ಅಂತಹ ಆಸ್ಪತ್ರೆಗಳಿಗೆ ಯಂತ್ರಗಳನ್ನು ನೀಡಲಾಗುವುದು. ಯೋಜನೆಗೆ ಆಸ್ಪತ್ರೆಗಳ ಆಯ್ಕೆಯ ವಿಚಾರದಲ್ಲಿ ಉಚಿತ ಸೇವೆಯೇ ಮಾನದಂಡ.
– ಟಿ.ಶ್ಯಾಮ್ಭಟ್, ಆಯುಕ್ತರು, ಬಿಡಿಎ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.