ಕನಕಪುರ: ಸಾತನೂರು ಅರಣ್ಯ ವ್ಯಾಪ್ತಿಯ ಕರಿಯಣ್ಣನ ದೊಡ್ಡಿ ಗ್ರಾಮದಲ್ಲಿ ಚಿರತೆ ಚರ್ಮ ಮಾರಾಟ ಮಾಡುತ್ತಿದ್ದ ತಂಡದ ಮೇಲೆ ಮಂಗಳವಾರ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸ್ದ್ದಿದು ಚಿರತೆಯ ಚರ್ಮ ವಶಪಡಿಸಿಕೊಂಡಿದ್ದಾರೆ.

ಚಿರತೆಗಳನ್ನು ಬೇಟೆಯಾಡಿ ಕೊಂದು ಚರ್ಮ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಚರ್ಮವನ್ನು ಕೊಳ್ಳುವವರಂತೆ ನಟಿಸಿ ಜಗದೀಶನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಯೋಗೇಶ ಪರಾರಿಯಾಗಿದ್ದಾನೆ. ಈತ ದೊಡ್ಡ ಆಲಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದಾನೆ.

ಸಂಗಮ-ಮುತ್ತತ್ತಿ ಅರಣ್ಯ ಪ್ರದೇಶವಾಗಿರುವುದರಿಂದ ವ್ಯವಸ್ಥಿತ ಜಾಲವೊಂದು ಕಾಡು ಪ್ರಾಣಿಗಳನ್ನು ಬೇಟೆಯಾಡಿ ಕೊಂದು ಚರ್ಮ ಮಾರಾಟ ಮಾಡುವ ದಂದೆಯಲ್ಲಿ ತೊಡಗಿದೆ. ಇದರ ಹಿಂದೆ ದೊಡ್ಡ ಜಾಲವಿದೆ ಎಂದು ಶಂಕಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಬೆಂಗಳೂರು ಅರಣ್ಯ ಸಂಚಾರಿದಳ ಮತ್ತು ಸಾತನೂರು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.