ಬೆಂಗಳೂರು: ಜಾಹೀರಾತು ಹಾಗೂ ಪ್ರಚಾರ ನಿರ್ದೇಶನಾಲಯವು ಬಿಬಿಎಂಪಿ ಸಹಯೋಗದಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ನಗರದ ಮಹಾತ್ಮ ಗಾಂಧಿ ರಸ್ತೆಯಲ್ಲಿರುವ ರಂಗೋಲಿ ಮೆಟ್ರೊ ಕಲಾ ಕೇಂದ್ರದ ಛಾಯಾ ಗ್ಯಾಲರಿಯಲ್ಲಿ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಿದೆ.

ಬಿಬಿಎಂಪಿ ವಿಶೇಷ ಆಯುಕ್ತ (ಚುನಾವಣೆ) ಕೆ.ಆರ್.ನಿರಂಜನ್ ಅವರು ಭಾನುವಾರ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ, ‘ಪ್ರದರ್ಶನದಲ್ಲಿರುವ ಛಾಯಾಚಿತ್ರಗಳು ಯುವಕರನ್ನು ಆಕರ್ಷಿಸುವ ರೀತಿಯಲ್ಲಿವೆ. ಇದರಿಂದಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಜಾಹೀರಾತು ಹಾಗೂ ಪ್ರಚಾರ ನಿರ್ದೇಶನಾಲಯದ ಕ್ಷೇತ್ರ ಪ್ರಚಾರ ಅಧಿಕಾರಿ ಪಿ.ಜಿ.ಪಾಟೀಲ್ ಮಾತ ನಾಡಿ, ಪ್ರದರ್ಶನದ ಮೊದಲ ದಿನವೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದರು.
ಮಾರ್ಚ್ 26ರವರೆಗೆ ಪ್ರದರ್ಶನ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.