ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಜೆಡಿಎಸ್ನ 12 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು

ಸೋಮವಾರ ಅಂತಿಮಗೊಳಿಸಲಾಗಿದೆ.

ಸಂಸದೀಯ ಮಂಡಳಿಯ ಅಧ್ಯಕ್ಷ ಎಚ್.ಸಿ.ನೀರಾವರಿ ಅಧ್ಯಕ್ಷತೆಯಲ್ಲಿ ನಡೆದ ಸಭೆ 12 ಹೆಸರುಗಳ ಪಟ್ಟಿಯನ್ನು ಅಂತಿಮಗೊಳಿಸಿ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರಿಗೆ ಕಳುಹಿಸಿದೆ. ಒಂದೆರಡು ದಿನದಲ್ಲಿ ಅಧಿಕೃತವಾಗಿ ಪಟ್ಟಿ ಬಿಡುಗಡೆಯಾಗಲಿದೆ.

ಶಿವಮೊಗ್ಗದಿಂದ ಯಾರು ಸ್ಪರ್ಧಿಸಬೇಕು ಎಂಬುದನ್ನು ಬಂಗಾರಪ್ಪ ಕುಟುಂಬದವರು ನಿರ್ಧರಿಸಲಿದ್ದಾರೆ ಎನ್ನಲಾಗಿದೆ.
ಅದೇ ರೀತಿ ಚಿಕ್ಕೊಡಿ ಕ್ಷೇತ್ರಕ್ಕೆ ಸಹೋದರರಾದ ಉತ್ತಮ ಪಾಟೀಲ, ಶ್ರೀಮಂತ ಪಾಟೀಲ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಇಬ್ಬರ ಪೈಕಿ ಯಾರು ಸ್ಪರ್ಧಿಸಬೇಕು ಎಂಬುದನ್ನು ಅವರಿಗೇ ಬಿಡಲಾಗಿದೆ.
ಇನ್ನುಳಿದ 16 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಅಂತಿಮಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಚಿಕ್ಕಬಳ್ಳಾಪುರಲೋಕಸಭಾ ಕ್ಷೇತ್ರದಿಂದ ಅನಿತಾಕುಮಾರಸ್ವಾಮಿ ಸ್ಪರ್ಧಿಸುವುದು ಖಚಿತವಾಗಿದೆ. ಎರಡನೇ ಪಟ್ಟಿಯಲ್ಲಿ ಅವರ ಹೆಸರು ಇರಲಿದೆ ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.