ಬೆಂಗಳೂರು: ಮುಂದಿನ ವರ್ಷ ಮಾರ್ಚ್ ವೇಳೆಗೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಬಿಐಎಎಲ್) ಟರ್ಮಿನಲ್ ವಿಸ್ತರಣಾ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದರು.
ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳ ಜೊತೆ ಗೃಹ ಕಚೇರಿ `ಕೃಷ್ಣಾ~ದಲ್ಲಿ ಶನಿವಾರ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, `ಟರ್ಮಿನಲ್ನ ವಿಸ್ತರಣಾ ಕಾರ್ಯವನ್ನು 2013ರ ಮಾರ್ಚ್ ವೇಳೆಗೆ ಪೂರ್ಣಗೊಳಿಸುವ ಭರವಸೆ ಅಧಿಕಾರಿಗಳಿಂದ ದೊರೆತಿದೆ~ ಎಂದರು.
ಬಿಐಎಎಲ್ ಅಧಿಕಾರಿಗಳು ಈ ಕುರಿತು ಮುಖ್ಯಮಂತ್ರಿಗಳಿಗೆ ವಿವರ ನೀಡಿದರು. ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಪ್ರತಿಕ್ರಿಯೆ ನೀಡಿದ ಅವರು, ವಿಮಾನ ನಿಲ್ದಾಣದ ವಿಸ್ತರಣಾ ಕಾರ್ಯಕ್ಕೆ ಮುಂದಿನ ಬಜೆಟ್ನಲ್ಲಿ ಹಣ ಮೀಸಲಿಡುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.
`ಟೋಲ್ ಸಂಗ್ರಹ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿಲ್ಲ. ಅದು ನಮಗೆ ಸಂಬಂಧಿಸಿದ ವಿಷಯವೂ ಅಲ್ಲ~ ಎಂದು ಬಿಐಎಎಲ್ ಅಧಿಕಾರಿಯೊಬ್ಬರು `ಪ್ರಜಾವಾಣಿ~ಗೆ ಮಾಹಿತಿ ನೀಡಿದರು.