ಬೆಂಗಳೂರು: ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರದ ಕಂಠೀರವ ಸ್ಟುಡಿಯೊ ಬಳಿ ಮಂಗಳವಾರ ನಡೆದಿದೆ.
ಚಿಕ್ಕಮಗಳೂರು ಮೂಲದ ಮಹೇಶ್ವರಪ್ಪ (22) ಮೃತಪಟ್ಟವರು. ಅವರು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೈಕ್ನಲ್ಲಿ ಹೊರವರ್ತುಲ ರಸ್ತೆ ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಟಿಪ್ಪರ್ ಅವರಿಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದು ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಿಪ್ಪರ್ ಚಾಲಕ ಜಾನಿ ಎಂಬಾತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ರಾಜಾಜಿನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.