ಬೆಂಗಳೂರು: `ತಾಂತ್ರಿಕ ಶಿಕ್ಷಣ ಮಂಡಳಿಯ ಅವೈಜ್ಞಾನಿಕ ನೀತಿಯಿಂದ ಡಿಪ್ಲೊಮಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ~ ಎಂದು ಆರೋಪಿಸಿ ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟದ (ಎಸ್‌ಎಫ್‌ಐ) ಕಾರ್ಯಕರ್ತರು ಪುರಭವನದ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.

ಪುರಭವನದಿಂದ ಬನ್ನಪ್ಪ ಪಾರ್ಕ್ ಕಡೆ ಪ್ರತಿಭಟನಾ ಜಾಥಾ ನಡೆಸಿದ ಕಾರ್ಯಕರ್ತರನ್ನು ಹಲಸೂರು ಗೇಟ್ ಪೊಲೀಸರು ಅಡ್ಡಗಟ್ಟಿದರು. ಈ ವೇಳೆ ಕೆಲವರು ಬಿಎಂಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ಮಾಡಿದ್ದರಿಂದ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿ, ಒಂಬತ್ತು ಜನರನ್ನು ಬಂಧಿಸಿದರು. ನಂತರ ಬಿಡುಗಡೆ ಮಾಡಲಾಯಿತು.

`ರಾಜ್ಯದಲ್ಲಿ ಶೇ 63ರಷ್ಟು ಡಿಪ್ಲೊಮಾ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಇದಕ್ಕೆ ತಾಂತ್ರಿಕ ಶಿಕ್ಷಣ ಮಂಡಳಿಯ ನೀತಿಗಳೇ ಕಾರಣ. ಮಂಡಳಿಯು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಹೊಸ ಪಠ್ಯಕ್ರಮವನ್ನು ರೂಪಿಸಿದೆ. ಆದರೆ, ಆ ಪಠ್ಯಕ್ರಮಕ್ಕೆ ಅನುಗುಣವಾಗಿ ಭೋದನೆ ಮಾಡುವ ಅರ್ಹ ಉಪನ್ಯಾಸಕರ ಕೊರತೆಯಿದೆ.

ರಾಜ್ಯದಲ್ಲಿ ಪಾಲಿಟೆಕ್ನಿಕ್ ಶಿಕ್ಷಣ ಸಂಪೂರ್ಣವಾಗಿ ಮಾರಾಟವಾಗುತ್ತಿದೆ. ಅಲ್ಲದೆ, ವಿಪರೀತ ಶುಲ್ಕ ವಸೂಲಿ, ಆಂತರಿಕ ಪರೀಕ್ಷೆಯ ಅಂಕ ನೀಡಿಕೆ, ಹಾಜರಾತಿ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ~ ಎಂದು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಅನಂತ್ ನಾಯಕ್ ಅರೋಪಿಸಿದರು.

`ಕೆಲವು ಡಿಪ್ಲೊಮಾ ಕಾಲೇಜುಗಳು ಪ್ರಯೋಗಾಲಯ, ಗ್ರಂಥಾಲಯ ಸೇರಿದಂತೆ ಮೂಲಸೌಕರ್ಯಗಳಿಂದ ವಂಚಿತವಾಗಿವೆ. ತರಗತಿಗಳು ಮುಗಿಯುವ ಮುನ್ನವೇ ಪರೀಕ್ಷೆಗಳನ್ನು ನಡೆಸುವುದು, ಆರು ತಿಂಗಳ ಕೋರ್ಸ್‌ಗಳನ್ನು ಎರಡೇ ತಿಂಗಳಿಗೆ ಮುಗಿಸುವುದು ಹೀಗೆ ತಾಂತ್ರಿಕ ಶಿಕ್ಷಣ ಮಂಡಳಿಯ ಅವೈಜ್ಞಾನಿಕ ನೀತಿಗಳಿಂದ ಡಿಪ್ಲೊಮಾ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದಾರೆ~ ಎಂದರು.

ಹೋರಾಟವನ್ನು ಹಾಳು ಮಾಡುವ ದೃಷ್ಟಿಯಿಂದ ಯಾರೊ ಕಿಡಿಗೇಡಿಗಳು ಬಸ್‌ಗಳ ಮೇಲೆ ಕಲ್ಲು ತೂರಾಟ ಮಾಡಿದರು. ಆದರೆ, ಪೊಲೀಸರು ಏಕಾಏಕಿ ನಮ್ಮ ಮೇಲೆ ಲಾಠಿ ಪ್ರಹಾರ ಮಾಡಿದರು. ಪೊಲೀಸರ ದೌರ್ಜನ್ಯವನ್ನು ನಾವು ಖಂಡಿಸುತ್ತೇವೆ ಎಂದು ಪ್ರತಿಭಟನಾಕಾರರು ಪುರಭವನಕ್ಕೆ ಹಿಂದಿರುಗಿ ಪ್ರತಿಭಟನೆ ಮುಂದುವರಿಸಿದರು.

`ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ ಅವರಿಗೆ ಮನವಿ ಸಲ್ಲಿಸಿದ್ದೇವೆ. ಎರಡು ದಿನಗಳಲ್ಲಿ ಸಭೆ ನಡೆಸಿ ಸಮಸ್ಯೆಗಳನ್ನು ಚರ್ಚಿಸುವುದಾಗಿ ಅವರು ಹೇಳಿದ್ದಾರೆ. ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ ಮುಂದುವರಿಸುತ್ತೇವೆ~ ಎಂದು ಸಂಘಟನೆಯ ಕಾರ್ಯದರ್ಶಿ ಹುಳ್ಳಿ ಉಮೇಶ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.