ಯಲಹಂಕ: ಬೆಂಗಳೂರು ಉತ್ತರ ತಾಲ್ಲೂಕು ಪಂಚಾಯಿತಿ ನೂತನ ಅಧ್ಯಕ್ಷರಾಗಿ ದಾಸನಪುರ ಹೋಬಳಿ ಆಲೂರು ಕ್ಷೇತ್ರದ ಕಾಂಗ್ರೆಸ್ನ ಎನ್.ನರಸಿಂಹಮೂರ್ತಿ ಹಾಗೂ ಜಾಲಾ ಹೋಬಳಿ ಬೆಟ್ಟಹಲಸೂರು ಕ್ಷೇತ್ರದ ಪಿ.ಎನ್.ಅರುಣಾ ಮಂಜುನಾಥ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕಾಗಿ ಗುರುವಾರ ನಡೆದ ಚುನಾವಣೆ ಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ರಾಮಚಂದ್ರ ಮತ್ತು ಅನ್ನಪೂರ್ಣಮ್ಮ ಅವರು ತಲಾ 9 ಮತಗಳನ್ನು ಪಡೆದರೆ, ಕಾಂಗ್ರೆಸ್ನ ನರಸಿಂಹಮೂರ್ತಿ ಮತ್ತು ಅರುಣಾ ಮಂಜುನಾಥ್ ಅವರು ತಲಾ 12 ಮತಗಳನ್ನು ಪಡೆದು ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಕಾಂತರಾಜು ತಿಳಿಸಿದರು.

ಮಾಜಿ ಶಾಸಕ ವಿ.ಕೃಷ್ಣಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಅಶೋಕನ್, ದಾನೇಗೌಡ, ಕೆಪಿಸಿಸಿ ಸದಸ್ಯ ಚೊಕ್ಕನಹಳ್ಳಿ ವೆಂಕಟೇಶ್ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದು, ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.