ಬೆಂಗಳೂರು

: ಬಿಬಿಎಂಪಿ ವ್ಯಾಪ್ತಿಯಲ್ಲಿ 2011-12ನೇ ಸಾಲಿನಲ್ಲಿ ಆಸ್ತಿ ತೆರಿಗೆ ದರದಲ್ಲಿ ಹೆಚ್ಚಳವಾಗುವುದಿಲ್ಲ. ಪ್ರತಿ ಮೂರು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆ ಪ್ರಮಾಣ ಪರಿಷ್ಕರಣೆ ಮಾಡುವ ಬದಲಿಗೆ ಐದು ವರ್ಷಕ್ಕೊಮ್ಮೆ ಪರಿಷ್ಕರಣೆ ಮಾಡುವ ಸಂಬಂಧ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವಕ್ಕೆ ಪಾಲಿಕೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಸಭೆಯ ಬಳಿಕ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ತೆರಿಗೆ ಮತ್ತು ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಎನ್. ಸದಾಶಿವ, ‘2011-12ನೇ ಸಾಲಿನಲ್ಲಿ ಆಸ್ತಿ ತೆರಿಗೆ ಪ್ರಮಾಣದಲ್ಲಿ ಯಾವುದೇ ಹೆಚ್ಚಳ ಮಾಡುವುದಿಲ್ಲ. ಆಸ್ತಿದಾರರು 2010-11ನೇ ಸಾಲಿನಲ್ಲಿ ಪಾವತಿಸಿದ ಮೊತ್ತವನ್ನೇ ಪ್ರಸಕ್ತ ಸಾಲಿನಲ್ಲೂ ಪಾವತಿಸಬಹುದು. ತೆರಿಗೆ ದರ ಪರಿಷ್ಕರಣೆಯನ್ನು ಐದು ವರ್ಷಕ್ಕೊಮ್ಮೆ ಕೈಗೊಳ್ಳುವ ಸಂಬಂಧ ಕಾಯ್ದೆ ತಿದ್ದುಪಡಿ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಸರ್ಕಾರದ ಅನುಮೋದನೆ ನಿರೀಕ್ಷೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದರು.

‘ಆಸ್ತಿದಾರರು ಏಪ್ರಿಲ್ 30ರೊಳಗೆ ಪೂರ್ಣ ತೆರಿಗೆ ಮೊತ್ತ ಪಾವತಿಸಿ ಶೇ 5ರಷ್ಟು ರಿಯಾಯ್ತಿ ಪಡೆಯಬಹುದು. ದಂಡ ರಹಿತವಾಗಿ ಅಕ್ಟೋಬರ್ 30ರೊಳಗೆ ತೆರಿಗೆ ಪಾವತಿಸಬಹುದಾಗಿದೆ’ ಎಂದು ಹೇಳಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.