ಬೆಂಗಳೂರು: ‘ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟಿ, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ(ಪರೀಕ್ಷೆ) ಅಶೋಕ್‌ಕುಮಾರ್ ತಿಳಿಸಿದರು.

ಕೆಂಪಾಪುರದ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಶಿಕ್ಷಕರು ಮಾರ್ಗದರ್ಶನದ ಮೂಲಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಅಣಿಗೊಳಿಸಬೇಕು. ವಿದ್ಯಾರ್ಥಿಗಳು ಕಾಲಹರಣ ಮಾಡದೇ ಏಕಾಗ್ರತೆಯಿಂದ ಅಭ್ಯಾಸ ಮಾಡುವ ಮೂಲಕ ಪರೀಕ್ಷೆಯನ್ನು ಸುಲಭವಾಗಿ ಎದುರಿಸಲು ಸಿದ್ಧರಾಗಬೇಕು’ ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಕಳೆದ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.