ಬೆಂಗಳೂರು: ನಮ್ಮ ಮೆಟ್ರೊ’ ಯೋಜನೆಯಡಿ ವಿವಿಧ ಕಾಮಗಾರಿ ಕೈಗೊಂಡಿರುವ 13 ಗುತ್ತಿಗೆದಾರರಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಬುಧವಾರ ಆದೇಶಿಸಿದೆ.

‘ನಮ್ಮ ಮೆಟ್ರೊ’ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಸ್ಥಿತಿ ಉತ್ತಮವಾಗಿಲ್ಲ ಎಂದು ದೂರಿ ಸ್ಯಾಮ್ಯುವೆಲ್ ಸತ್ಯಶೀಲನ್ ಎಂಬುವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾಯಮೂರ್ತಿ ಎಸ್.ಎನ್. ಸತ್ಯನಾರಾಯಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈಆದೇಶ ನೀಡಿತು.

‘ಕಾರ್ಮಿಕರ ಕಲ್ಯಾಣಕ್ಕೆ ಆದ್ಯತೆ ನೀಡದ ಗುತ್ತಿಗೆದಾರರ ಹೆಸರನ್ನು ನಮಗೆ ತಿಳಿಸಿ. ಅವರಿಗೆ ನೋಟಿಸ್ ಜಾರಿ ಮಾಡಿ, ನಾವೇ ಅವರಿಗೆ ಎಚ್ಚರಿಕೆ ನೀಡುತ್ತೇವೆ’ ಎಂದು ಪೀಠ ಹಿಂದಿನ ಬಾರಿ ವಿಚಾರಣೆಯ ವೇಳೆ ಮೌಖಿಕವಾಗಿ ಹೇಳಿತ್ತು.

ಅರ್ಜಿಯ ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.