ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನೇತಾರರ ದೃಷ್ಟಿಕೋನ ಬದಲಾಯಿಸಿ’

Last Updated 7 ಏಪ್ರಿಲ್ 2018, 19:49 IST
ಅಕ್ಷರ ಗಾತ್ರ

ಬೆಂಗಳೂರು: ಆಡಳಿತ ವ್ಯವಸ್ಥೆ ಹಾಗೂ ದೇಶ ಆಳುವ ನೇತಾರರ ದೃಷ್ಟಿಕೋನವನ್ನು ಬದಲಾಯಿಸುವ ನಿಟ್ಟಿನಲ್ಲಿ ಯುವ ಜನಾಂಗ ಮುನ್ನಡೆಯಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಸಲಹೆ ನೀಡಿದರು.

ಯಲಹಂಕದ ಶೇಷಾದ್ರಿಪುರ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ‘ಬೆಳ್ಳಿ ಹಬ್ಬ’ದಲ್ಲಿ ವಿಶೇಷ ಉಪನ್ಯಾಸ ನೀಡಿದರು.

‘ದೇಶದ ಬೆಳವಣಿಗೆಗೆ ದೂರದೃಷ್ಟಿ ಅತಿ ಮುಖ್ಯ. ಕೃಷಿ, ಕೈಗಾರಿಕೆ ಮತ್ತು ಮಾಹಿತಿ ತಂತ್ರಜ್ಞಾನ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನಾವು ಸಾಕಷ್ಟು ಪ್ರಗತಿ ಸಾಧಿಸಿದ್ದೇವೆ. ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕು’ ಎಂದರು.

ವಿದ್ಯಾರ್ಥಿಗಳು ಸಮಯ ಪಾಲನೆ ಮತ್ತು ಅವಕಾಶಗಳ ಸದ್ಬಳಕೆ ಮಾಡಿಕೊಳ್ಳಬೇಕು. ಕೀಳರಿಮೆ ಬಿಟ್ಟು ಆತ್ಮವಿಶ್ವಾಸ ಮತ್ತು ಧೈರ್ಯ ಬೆಳೆಸಿಕೊಂಡು, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ಉತ್ತಮ ಚಾರಿತ್ರ್ಯವನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.

ಶೇಷಾದ್ರಿಪುರ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ.ವೂಡೇ ಪಿ.ಕೃಷ್ಣ, ‘ನಿಸ್ವಾರ್ಥ,ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿಕೊಂಡರೆ ಮಾತ್ರ ದೇಶದ ಅಭಿವೃದ್ಧಿಗೆ
ಕೊಡುಗೆ ನೀಡಲು ಸಾಧ್ಯ’ ಎಂದರು. ಯಕ್ಷಗಾನ, ಡೊಳ್ಳುಕುಣಿತ, ನಂದಿಕೋಲು, ಪೂಜಾಕುಣಿತವನ್ನು ಪ್ರದರ್ಶಿಸಿದರು. ಕರಗ ಮಹೋತ್ಸವ ಗಮನ ಸೆಳೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT