ಬೆಂಗಳೂರು: ಮುಷ್ಕರದ ಹಿನ್ನೆಲೆಯಲ್ಲಿ ಬುಧವಾರ ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಪರೀಕ್ಷೆಗಳ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ. ಇದೇ 28ರಂದು ನಡೆಯಲಿರುವ ಪರೀಕ್ಷೆಗಳು ಈಗಾಗಲೇ ಪ್ರಕಟವಾಗಿರುವ ವೇಳಾಪಟ್ಟಿಯ ಪ್ರಕಾರ ನಡೆಯಲಿವೆ.
ವಿವಿಯ ಪಿಎಚ್.ಡಿ ಪ್ರವೇಶ(ಕಲೆ, ಶಿಕ್ಷಣ, ವಾಣಿಜ್ಯ ಮತ್ತು ವ್ಯವಹಾರ) ವಿಷಯಗಳ ಸಂದರ್ಶನ ಪ್ರಕ್ರಿಯೆಯನ್ನು ಮುಂದೂಡಲಾಗಿದ್ದು, ದಿನಾಂಕವನ್ನು ಅತೀ ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಮಾಹಿತಿಗಾಗಿ phd.bangloreuniversity,ac.in ಸಂಪರ್ಕಿಸಬಹುದು.