ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್ ನಾರಾಯಣಸ್ವಾಮಿಗೆ ಜಾಮೀನು

Last Updated 3 ಮಾರ್ಚ್ 2018, 20:15 IST
ಅಕ್ಷರ ಗಾತ್ರ

ಬೆಂಗಳೂರು: ಹೊರಮಾವು ಬಿಬಿಎಂಪಿ ಕಚೇರಿಯಲ್ಲಿ ದಾಂದಲೆ ನಡೆಸಿದ್ದ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಅವರಿಗೆ ಸೆಷನ್ಸ್ ನ್ಯಾಯಾಲಯ ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು.

₹ 1 ಲಕ್ಷ ಮೊತ್ತದ ಬಾಂಡ್ ಇಡಬೇಕು, ವಿಚಾರಣೆಗೆ ಹಾಜರಾಗಬೇಕು ಹಾಗೂ ಸಾಕ್ಷ್ಯಗಳನ್ನು ನಾಶ ಮಾಡಬಾರದು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.

ವಿವಾದಿತ ಜಮೀನಿಗೆ ಖಾತೆ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಫೆ.16ರಂದು ಪಾಲಿಕೆ ಕಚೇರಿಗೆ ನುಗ್ಗಿದ್ದ ನಾರಾಯಣಸ್ವಾಮಿ, ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ಮಾಡಿದ್ದರು. ಅಲ್ಲದೆ, ದಾಖಲೆಗಳ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲು ಮುಂದಾಗಿದ್ದರು. ಈ ಸಂಬಂಧ ಪಾಲಿಕೆ ಅಧಿಕಾರಿಗಳು ಕೊಟ್ಟ ದೂರಿನ ಅನ್ವಯ ರಾಮಮೂರ್ತಿನಗರ ಪೊಲೀಸರು ಫೆ.22ರಂದು ಆರೋಪಿಯನ್ನು ಬಂಧಿಸಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT