ಬೆಂಗಳೂರು: ರಾಜ್ಯ ಮತ್ತು ಅಂತರರಾಜ್ಯ ರಹದಾರಿ ಬಸ್‌ಗಳಿಗೆ ವೇಗ ನಿಯಂತ್ರಕ (ಸ್ಪೀಡ್ ಗವರ್ನರ್) ಅಳವಡಿಸುವುದರಿಂದ ವಿನಾಯಿತಿ ನೀಡಲಾಗಿದೆ.

ಕೇಂದ್ರ ಭೂಸಾರಿಗೆ ಸಚಿವಾಲಯದ ಅಧಿಸೂಚನೆಯನ್ನು ಆಧಾರವಾಗಿ ಇಟ್ಟುಕೊಂಡು ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯ, ರಾಷ್ಟ್ರೀಯ ಮತ್ತು ಅಖಿಲ ಭಾರತ ಪ್ರವಾಸಿ ಪರವಾನಗಿ ಪಡೆದಿರುವ ವಾಹನಗಳಿಗೆ ವೇಗ ನಿಯಂತ್ರಕ ಅಳವಡಿಸಬೇಕಾಗಿಲ್ಲ. ಕೇಂದ್ರ ಸರ್ಕಾರದ ಅಧಿಸೂಚನೆ ಪ್ರಕಾರ ಏಪ್ರಿಲ್ 1ರಿಂದ ಇಡೀ ದೇಶದಲ್ಲಿ ಇದು ಜಾರಿಗೆ ಬರಲಿದೆ. ಆದರೆ, ರಾಜ್ಯಸಾರಿಗೆ ಇಲಾಖೆ ಡಿ.1ರಿಂದಲೇ ಇದನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ.

ತ್ರಿಚಕ್ರ ವಾಹನಗಳು, 3.5 ಟನ್‌ಗಿಂತ ಕಡಿಮೆ ಭಾರದ ವಾಹನಗಳು (ಟ್ಯಾಕ್ಸಿಗಳು), ಅಗ್ನಿಶಾಮಕ ವಾಹನಗಳು, ಆಂಬುಲೆನ್ಸ್, ಪೊಲೀಸ್ ವಾಹನಗಳು ವೇಗ ನಿಯಂತ್ರಕಗಳನ್ನು ಅಳವಡಿಸಿಕೊಳ್ಳಬೇಕಾಗಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.