ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್ ಕಾರ್ಖಾನೆಗೆ ಬೀಗಮುದ್ರೆ

Last Updated 17 ಮೇ 2019, 20:19 IST
ಅಕ್ಷರ ಗಾತ್ರ

ಬೆಂಗಳೂರು: ಅನಧಿಕೃತವಾಗಿ ನಡೆಸಲಾಗುತ್ತಿದ್ದ ಪ್ಲಾಸ್ಟಿಕ್ ಕಾರ್ಖಾನೆ ಮೇಲೆ ದಿಢೀರನೆ ದಾಳಿ ನಡೆಸಿದ ಬಿಬಿಎಂಪಿ ಆರೋಗ್ಯ ಅಧಿಕಾರಿಗಳು 250 ಕೆ.ಜಿಗೂ ಹೆಚ್ಚಿನ ಪ್ಲಾಸ್ಟಿಕ್‌ ವಶಪಡಿಸಿಕೊಂಡರು. ಕಾರ್ಖಾನೆಗೆ ಬೀಗಮುದ್ರೆ ಹಾಕಿದರು.

ದೊಡ್ಡಬಿದರಕಲ್ಲು ವಾರ್ಡ್‌ನ ಅಂದ್ರಹಳ್ಳಿಯ ಸಾಯಿಬಾಬಾ ದೇವಸ್ಥಾನದ ರಸ್ತೆಯ ಕಾರ್ಖಾನೆ ಮೇಲೆ ನಡೆದ ದಾಳಿ
ಯ ನೇತೃತ್ವವನ್ನು ಪಾಲಿಕೆಯ ಮುಖ್ಯ ಆರೋಗ್ಯ ಅಧಿಕಾರಿ ಡಾ.ಮನೋರಂಜನ್ ಹೆಗಡೆ ವಹಿಸಿದ್ದರು.

‘ಇಂತಹ ಅನಧಿಕೃತ ಕಾರ್ಖಾನೆಗಳಿಂದ ಪ್ಲಾಸ್ಟಿಕ್‌ ಹಾವಳಿ ಹೆಚ್ಚುತ್ತಿದೆ. ಇದರಿಂದ ಪಾಲಿಕೆಗೂ ಕೆಟ್ಟ ಹೆಸರು ಬರುತ್ತಿದೆ. ಅದನ್ನು ತಪ್ಪಿಸಲು ಇಂತಹ ಅನಿರೀಕ್ಷಿತ ದಾಳಿಯ ಕ್ರಮ ವಹಿಸುತ್ತಿದ್ದೇವೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT