ಬೆಂಗಳೂರು: ‘ಬಂಜಾರಾ ಜನಾಂಗದ ಅಭಿವೃದ್ಧಿಗೆ ಸರ್ಕಾರ ಕೂಡಲೇ 100 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಬೇಕು’ ಎಂದು ‘ಕರ್ನಾಟಕ ಪ್ರದೇಶ ಲಂಬಾಣಿ ಬಂಜಾರ ಕಲ್ಯಾಣ ಸಂಘ’ದ ರಾಜ್ಯ ಅಧ್ಯಕ್ಷ ಕೃಷ್ಣಾ ನಾಯಕ್ ಮನವಿ ಮಾಡಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹೆಸರಿಗೆ ಮಾತ್ರ ಲಂಬಾಣಿ ಅಭಿವೃದ್ಧಿ ನಿಗಮ ಸ್ಥಾಪಿಸಿ 10 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಇದಕ್ಕೂ ಮೊದಲು ಬಂಜಾರರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿದ್ದಾಗ ಹಲವಾರು ಸೌಲಭ್ಯಗಳು ದೊರೆಯುತ್ತಿದ್ದವು.

ಇದೀಗ ಪ್ರತ್ಯೇಕ ನಿಗಮ ಮಾಡಿರುವುದರಿಂದ ಅವಶ್ಯ ಸೌಲಭ್ಯಗಳು ಸಿಗುತ್ತಿಲ್ಲ’ ಎಂದು ದೂರಿದರು.
ಬಂಜಾರ ಭವನ ಸ್ಥಾಪಿಸುತ್ತೇವೆ ಎಂದು ಹಲವಾರು ರಾಜಕಾರಣಿಗಳು ಹಣ ಎತ್ತಿದ್ದೇ ಬಂತು. ಭವನ ಮಾತ್ರ ನಿರ್ಮಾಣವಾಗಿಲ್ಲ ಎಂದು ದೂರಿದರು..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.