ಬೆಂಗಳೂರು: ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿಯ ತೀವ್ರತೆ ಅಂದಾಜಿಸಲು ಬಿಜೆಪಿ ಪ್ರತಿ ತಾಲ್ಲೂಕು ಮಟ್ಟದಲ್ಲಿ 10ರಿಂದ 12 ತಂಡಗಳನ್ನು ರಚಿಸಲಿದೆ.

ಪಕ್ಷದ ಇಲ್ಲಿನ ಕಚೇರಿ `ಜಗನ್ನಾಥ ಭವನ~ದಲ್ಲಿ ಗುರುವಾರ ನಡೆದ ಪದಾಧಿಕಾರಿ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ವಕ್ತಾರ ಸಿ.ಟಿ. ರವಿ, `ಈ ತಂಡಗಳು ಕುಗ್ರಾಮಗಳಿಗೂ ಭೇಟಿ ನೀಡಲಿವೆ, ತಮ್ಮ ವರದಿಯನ್ನು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಸಲ್ಲಿಸಲಿವೆ~ ಎಂದರು.

ವಿವಿಧ ತಾಲ್ಲೂಕುಗಳಿಂದ ಪಡೆದ ವರದಿಯನ್ನು ಜಿಲ್ಲಾ ಅಧ್ಯಕ್ಷರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರಿಗೆ ನೀಡುತ್ತಾರೆ. ಮುಂದಿನ ಕ್ರಮಕ್ಕಾಗಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರಿಗೆ ನೀಡಲಾಗುತ್ತದೆ.

ನಾಯಕತ್ವ ಕುರಿತು ಪಕ್ಷ ಎದುರಿಸುತ್ತಿರುವ ಗೊಂದಲವನ್ನು ಪಕ್ಷದ ವರಿಷ್ಠರು 15 ದಿನಗಳಲ್ಲಿ ಬಗೆಹರಿಸಲಿದ್ದಾರೆ ಎಂದು ಈಶ್ವರಪ್ಪ ಸಭೆಯಲ್ಲಿ ಪದಾಧಿಕಾರಿಗಳಿಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಹಕ್ಕುಪತ್ರ: ಕೊಳೆಗೇರಿ ಪ್ರದೇಶದ ಜನರಿಗೆ ಹಕ್ಕುಪತ್ರ ನೀಡುವ ಕೆಲಸವನ್ನು ತ್ವರಿತಗೊಳಿಸುವ ಬಗ್ಗೆಯೂ ಪದಾಧಿಕಾರಿಗಳ ಸಭೆಯಲ್ಲಿ ಚರ್ಚಿಸಲಾಗಿದೆ. ಆದಷ್ಟು ಬೇಗ ಹಕ್ಕುಪತ್ರ ಕೊಡಿಸುವ ಕೆಲಸ ಆಗಬೇಕು. ಇದಕ್ಕೆ ಪಕ್ಷದ ಕಾರ್ಯಕರ್ತರು ಕೂಡ ಸಹಕರಿಸಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.