ಬೆಂಗಳೂರು: ಬಿಬಿಎಂಪಿ ಕಾಮಗಾರಿಗಳಲ್ಲಿ ನಡೆದಿರುವ ಅಕ್ರಮ ಕುರಿತು ಆಯುಕ್ತರ ತಾಂತ್ರಿಕ ಜಾಗೃತ ಕೋಶ (ಟಿವಿಸಿಸಿ) ನೀಡಿರುವ ವರದಿ ಆಧರಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಸಿಐಡಿ ತನಿಖೆಯೂ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ವಿಧಾನ ಪರಿಷತ್ತಿನಲ್ಲಿ ಬುಧವಾರ ಹೇಳಿದರು.

2008-09, 2009-10ನೇ ಸಾಲಿನಲ್ಲಿ ಬಿಬಿಎಂಪಿಯ ಕಾಮಗಾರಿಗಳಲ್ಲಿ ನಡೆದಿರುವ ಅವ್ಯವಹಾರ ಕುರಿತು ಕಾಂಗ್ರೆಸ್ನ ಎಂ.ಆರ್. ಸೀತಾರಾಂ ಅವರು ಸರ್ಕಾರದ ಗಮನ ಸೆಳೆದಾಗ ಉತ್ತರ ನೀಡಿದ ಶೆಟ್ಟರ್, `ವಿಚಾರಣೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು~ ಎಂದರು.

ಅನುಮೋದನೆ: ವಿಧಾನಸಭೆಯಲ್ಲಿ ಒಪ್ಪಿಗೆ ಪಡೆದುಕೊಂಡಿರುವ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ತಿದ್ದುಪಡಿ ಮಸೂದೆಗೆ ವಿಧಾನ ಪರಿಷತ್ತು ಬುಧವಾರ ಅಂಗೀಕಾರ ನೀಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.