ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ: ನೂರ ಹತ್ತು ಹಳ್ಳಿಗಳಲ್ಲಿ ನೀರಿನ ಸಮಸ್ಯೆ

Last Updated 1 ಮಾರ್ಚ್ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೇಸಿಗೆ ಕಾವು ಹೆಚ್ಚುತ್ತಿದ್ದು, ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾ­ಗಿ­ರುವ 110 ಹಳ್ಳಿಗಳಲ್ಲಿ ಈ ಬಾರಿಯ ಕುಡಿಯುವ ನೀರಿನ ಅಭಾವ ತಲೆ­ದೋರಿದೆ. ಕೆಲವೆಡೆ ಕಾವೇರಿ ನೀರಿನ ಸಂಪರ್ಕ ಕಲ್ಪಿಸಲಾಗಿದ್ದರೂ, ನೀರು ಕುಡಿ­ಯುವ ಭಾಗ್ಯ ಮಾತ್ರ ದೊರೆತಿಲ್ಲ.
ಪಾಲಿಕೆ ವ್ಯಾಪ್ತಿಯ ಕೆಲ ಹಳ್ಳಿಗಳಿಗೆ ಕುಡಿ­ಯುವ ನೀರು ಸರಬರಾಜು ಮಾಡಲು ಸಮರ್ಪಕ ಸೌಲಭ್ಯವೂ ಇಲ್ಲ. ಇದರಿಂದಾಗಿ ಈ ಪ್ರದೇಶದ ನಿವಾಸಿಗಳು ಸಂಪೂರ್ಣವಾಗಿ ಕೊಳವೆ ಬಾವಿ ನೀರಿನ ಮೇಲೆ ಅವಲಂಬಿತರಾಗಬೇಕಾಗಿದೆ.

‘ಸದ್ಯ ಇರುವ ಬೋರ್‌ವೆಲ್‌­ಗ­ಳಿಂದಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಆದರೆ, ಬಿಸಿಲಿನ ಝಳ ಹೆಚ್ಚಾದಂತೆ ನೀರಿನ ಸಮಸ್ಯೆಯೂ ಬಿಗಡಾಯಿಸುತ್ತಿದೆ. ಕೊಳವೆ ಬಾವಿಗಳು ಕೂಡ ಬತ್ತಿ ಹೋಗುತ್ತಿವೆ. ಮುಂದಿನ ದಿನ­ಗಳಲ್ಲಿ ನೀರಿಗಾಗಿ ಏನು ಮಾಡ­ಬೇಕೆಂದು ತೋಚುತ್ತಿಲ್ಲ’ ಎಂದು ಹೊರ­ಮಾವು ನಿವಾಸಿ ಆಂಜನೇಯ ತಮ್ಮ ಸಮಸ್ಯೆ ಬಿಚ್ಚಿಟ್ಟರು.

‘ಟ್ಯಾಂಕರ್‌ನಲ್ಲಿ ನೀರು ಪೂರೈಕೆ ಮಾಡಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ಹೇಳುತ್ತಾರೆ. ಆದರೆ, ನಮ್ಮ ಪ್ರದೇಶಕ್ಕೆ ಯಾವುದೇ ಟ್ಯಾಂಕರ್‌ ಬರುತ್ತಿಲ್ಲ. ಮುಂದಿನ ಮೂರು ತಿಂಗಳು ಇಲ್ಲಿನ ನಿವಾಸಿಗಳ ಗೋಳು ಹೇಳ­ತೀರದು’ ಎಂದು ಅವರು ನುಡಿದರು.
ಕುಡಿಯುವ ನೀರಿನ ಪೂರೈಕೆ ಸಮಸ್ಯೆ ಸಂಬಂಧ ಇತ್ತೀಚೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ಗ್ರಾಮಗಳ ನಿವಾಸಿ­ಗಳಿಗೆ ಕುಡಿಯುವ ನೀರು ಪೂರೈಸುವಂತೆ ಬಿಬಿಎಂಪಿ ಹಾಗೂ ಜಲಮಂಡಳಿಗೆ ನಿರ್ದೇಶನ ನೀಡಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಜಲಮಂಡಳಿ ಅಧಿಕಾರಿಯೊಬ್ಬರು, ‘ಕಾರ್ಯನಿರ್ವಹಿ­ಸದ ಬೋರ್‌ವೆಲ್‌­ಗಳನ್ನು ಸರಿಪಡಿಸು­ವುದು ಹಾಗೂ 30 ಸ್ಥಳಗಳಿಗೆ ಮೂರು ದಿನಗಳಿಗೊಮ್ಮೆ ಟ್ಯಾಂಕರ್‌ನಲ್ಲಿ ನೀರು ಪೂರೈಸುವುದು ಮಾತ್ರ ನಮ್ಮ ಕೆಲಸ’ ಎಂದಿದ್ದಾರೆ.

ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮಿನಾರಾ­ಯಣ ಅವರು. ‘ಈ ಹಳ್ಳಿಗಳಿಗೆ ಪಾಲಿಕೆ­ಯು ಟ್ಯಾಂಕರ್‌ ಮೂಲಕ ನೀರು ಪೂರೈ­ಸುತ್ತಿದೆ. ಅಲ್ಲದೆ, ನೀರಿನ ಶುದ್ಧೀಕರಣ ಘಟಕಗಳ ಸ್ಥಾಪನೆಗೆ ಕ್ರಮಕೈಗೊಳ್ಳಾಗಿದೆ. ಬೇಸಿಗೆಯಲ್ಲಿ ತಲೆದೋರುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಜಲಮಂಡಳಿ ಸಹಾಯದೊಂದಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT