ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಒನ್‌ನಲ್ಲೂ ಗುರುತು ಚೀಟಿ ವಿತರಣೆ

Last Updated 5 ಏಪ್ರಿಲ್ 2013, 19:32 IST
ಅಕ್ಷರ ಗಾತ್ರ

ಬೆಂಗಳೂರು: ಹೊಸದಾಗಿ ಹೆಸರು ಸೇರಿಸಿರುವ ಮತದಾರರಿಗೆ `ಕರ್ನಾಟಕ ಒನ್' ಮತ್ತು `ಬೆಂಗಳೂರು ಒನ್' ಕೇಂದ್ರಗಳ ಮೂಲಕವೂ ಚುನಾವಣಾ ಗುರುತಿನ ಚೀಟಿ ವಿತರಿಸಲಾಗುತ್ತದೆ. ಒಂದೆರಡು ದಿನಗಳಲ್ಲಿ ಈ ಕುರಿತ ವಿವರವಾದ ಮಾಹಿತಿ ನೀಡಲಾಗುವುದು ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನಿಲ್‌ಕುಮಾರ್ ಝಾ ತಿಳಿಸಿದರು.

ಬೆಂಗಳೂರಿನಲ್ಲಿ ವಾರ್ಡ್ ಕಚೇರಿಗಳಲ್ಲಿ ಅಷ್ಟೇ ಅಲ್ಲದೆ, ಬೆಂಗಳೂರು ಒನ್ ಕೇಂದ್ರಗಳ ಮೂಲಕವೂ ಗುರುತಿನ ಚೀಟಿ ನೀಡಲಾಗುತ್ತದೆ. ವಾರ್ಡ್ ಕಚೇರಿಗಳಲ್ಲಿ ಕಾರ್ಡ್ ಪಡೆದರೆ ಹಣ ನೀಡಬೇಕಾಗಿಲ್ಲ. ಆದರೆ, ಬೆಂಗಳೂರು ಒನ್ ಕೇಂದ್ರಗಳ ಮೂಲಕ ಪಡೆದರೆ ಹತ್ತು ರೂಪಾಯಿ ನೀಡಬೇಕಾಗುತ್ತದೆ ಎಂದು ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಹೆಸರು ನೋಂದಾಯಿಸಲು 8.26 ಲಕ್ಷ ಅರ್ಜಿಗಳು ಬಂದಿವೆ. ಈ ಪೈಕಿ 4.93 ಲಕ್ಷ ಅರ್ಜಿದಾರರ ಹೆಸರನ್ನು ಪಟ್ಟಿಗೆ ಸೇರಿಸಲಾಗಿದೆ. ಜ. 28ರ ನಂತರ ಅರ್ಜಿ ಸಲ್ಲಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ಇರುವವರು ಗುರುತಿನ ಚೀಟಿ ಪಡೆಯಬಹುದಾಗಿದೆ ಎಂದರು.

ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಇದೇ 7ರವರೆಗೆ ಅವಕಾಶ ಇದೆ. ಭಾನುವಾರ (ಏ.7) ವಾರ್ಡ್ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದು ಅವರು ತಿಳಿಸಿದರು.


.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT