ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮಕ್ಕಳ ಅಪೌಷ್ಟಿಕತೆಯನ್ನು ತಗ್ಗಿಸಲು ಸರ್ಕಾರ ಈ ಬಾರಿಯ ಬಜೆಟ್ನಲ್ಲಿ ಹೆಚ್ಚಿನ ಒತ್ತು ನೀಡಬೇಕು ಎಂದು ಮಕ್ಕಳ ಅಪೌಷ್ಟಿಕತೆ ನಿರ್ಮೂಲನಾ ವೇದಿಕೆಯು ಒತ್ತಾಯಿಸಿದೆ.

ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿ ಮಾತನಾಡಿದ ವೇದಿಕೆ ಯ ಸಂಚಾಲಕ ಮ್ಯಾಥ್ಯೂಸ್ ಫಿಲಿಪ್ಸ್, `ರಾಜ್ಯದ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚುತ್ತಿದ್ದರೂ ಸರ್ಕಾರ ಈ ಬಗ್ಗೆ ಗಮನ ನೀಡುತ್ತಿಲ್ಲ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅಪೌಷ್ಟಿತೆಯಿಂದ ಬಳಲುತ್ತಿರುವ ಮಕ್ಕಳಿದ್ದಾರೆ. ಆದರೆ ಸರ್ಕಾರ ಸುಳ್ಳು ಅಂಕಿ ಅಂಶಗಳನ್ನು ಪ್ರದರ್ಶಿಸುತ್ತಿದೆ. ಅಂಗನವಾಡಿಗಳಿಗೆ ಕಳಪೆಯ ಪೌಷ್ಟಿಕ ಆಹಾರ ಪೂರೈಕೆ ಮಾಡುತ್ತಿರುವ ಕಂಪೆನಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು~ ಎಂದು ಅವರು ಒತ್ತಾಯಿಸಿದರು.

`ಅಪೌಷ್ಟಿಕತೆ ಇರುವ ಮಕ್ಕಳ ಗುರುತಿಸುವಿಕೆಯಲ್ಲಿ ಸರ್ಕಾರ ಸೋಲುತ್ತಿದೆ. ಅಪೌಷ್ಟಿಕತೆಯ ಬಗ್ಗೆ ಮಾಧ್ಯಮಗಳು ಹೆಚ್ಚಿನ ಆಸಕ್ತಿ ವಹಿಸಿದ ಕಾರಣಕ್ಕೆ ರಾಯಚೂರಿನಲ್ಲಿ ಮಕ್ಕಳ ಮರು ಸಮೀಕ್ಷೆ ಮಾಡಲಾಗುತ್ತಿದೆ.

ಆದರೆ ಆ ಸಮೀಕ್ಷೆಯ ಅಂಕಿ ಅಂಶಗಳೂ ತಪ್ಪಾಗಿವೆ. ರಾಯಚೂರು ಜಿಲ್ಲೆಯೊಂದರಲ್ಲೇ ಸುಮಾರು ಎಂಟು ಸಾವಿರಕ್ಕೂ ಹೆಚ್ಚು ಅಪೌಷ್ಟಿಕ ಮಕ್ಕಳಿದ್ದಾರೆ. ಆದರೆ ಸರ್ಕಾರ ಸುಮಾರು ನಾಲ್ಕು ಸಾವಿರ ಅಪೌಷ್ಟಿಕ ಮಕ್ಕಳ ಅಂಕಿ ಅಂಶವನ್ನು ತೋರುತ್ತಿದೆ. ಇದು ಸರ್ಕಾರವೇ ಮಾಡುತ್ತಿರುವ ಪ್ರಾದೇಶಿಕ ಅಸಮಾನತೆ~ ಎಂದು ಅವರು ಆರೋಪಿಸಿದರು.

ಸಾಮಾಜಿಕ ಪರಿವರ್ತನಾ ಜನಾಂದೋಲನದ ರಾಜ್ಯ ಸಂಘಟಕ ವೈ.ಮರಿಸ್ವಾಮಿ ಮಾತನಾಡಿ, `ರಾಜ್ಯದಲ್ಲಿ ಒಟ್ಟು 71,605 ಮಕ್ಕಳು ತೀವ್ರ ಹಂತದ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಆರು ವರ್ಷದೊಳಗಿನ ಸುಮಾರು 68,55,801 ಮಕ್ಕಳಲ್ಲಿ ಕೇವಲ 37,74,267 ಮಕ್ಕಳನ್ನು ಮಾತ್ರ ಅಂಗನವಾಡಿಗಳಿಗೆ ಸೇರಿಸಲಾಗಿದೆ. ಈ ಅಂಶ ಸರ್ಕಾರಕ್ಕೆ ತಿಳಿದಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ದುರಂತ~ ಎಂದರು.

`ಪಕ್ಕದ ತಮಿಳುನಾಡು, ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿನ ಸರ್ಕಾರಗಳು ಪ್ರತಿ ಮಗುವಿಗೆ ಸುಮಾರು 11 ರೂ.ಗಳ ವರೆಗೆ ಹಣವನ್ನು ಮೀಸಲಿಡುತ್ತಿವೆ. ಆದರೆ ರಾಜ್ಯದಲ್ಲಿ ಕೇವಲ ನಾಲ್ಕು ರೂ.ಗಳನ್ನು ಮಾತ್ರ ಆರು ವರ್ಷದೊಳಗಿನ ಮಕ್ಕಳಿಗಾಗಿ ಮೀಸಲಿಡಲಾಗಿದೆ. ಈ ಬಾರಿಯ ಬಜೆಟ್ನಲ್ಲಿ ಸರ್ಕಾರ ಪ್ರತಿ ಮಗುವಿಗೆ ಕನಿಷ್ಠ 10 ರೂ. ಮೀಸಲಿಡಬೇಕು. ಅಪೌಷ್ಟಿಕತೆಯನ್ನು ನಿರ್ಮೂಲನೆ ಮಾಡಲು ಇನ್ನಾದರೂ ರಾಜ್ಯ ಸರ್ಕಾರ ಮುಂದಾಗಬೇಕು~ ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಾಲ ಕಾರ್ಮಿಕ ವಿರೋಧಿ ಆದೋಲನದ ಬೆಂಗಳೂರು ಜಿಲ್ಲಾ ಸಂಚಾಲಕ ನಾಗಸಿಂಹರಾವ್, ಜನಾರೋಗ್ಯ ಆಂದೋಲನ ಕರ್ನಾಟಕದ ರಾಜ್ಯ ಸಹ ಸಂಚಾಲಕಿ ಡಾ.ಆಶಾ ಕಿಲಾರೊ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.