ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಕೂಟಕ್ಕೆ ಅಮೃತ ಮಹೋತ್ಸವ: ಸ್ಥಾಪಕಿ ಕಲ್ಯಾಣಮ್ಮ ಪುತ್ಥಳಿ ಅನಾವರಣ

Last Updated 13 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಮಕ್ಕಳ ಪಠ್ಯೇತರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಮಕ್ಕಳ ಕೂಟವು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಿಬಿಎಂಪಿ ಬಜೆಟ್‌ನಲ್ಲಿ ಕೂಟಕ್ಕೆ ಒಂದು ಲಕ್ಷ ರೂಪಾಯಿ ಅನುದಾನ ಒದಗಿಸಲಾಗುವುದು~ ಎಂದು ಮೇಯರ್ ಡಿ.ವೆಂಕಟೇಶಮೂರ್ತಿ ಭರವಸೆ ನೀಡಿದರು.

ಅಖಿಲ ಕರ್ನಾಟಕ ಮಕ್ಕಳ ಕೂಟವು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಅಮೃತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ, `ಮದುವೆಯಾದ, ಕೆಲವೇ ದಿನಗಳಿಗೆ ವಿಧವೆಯಾದ ಆರ್.ಕಲ್ಯಾಣಮ್ಮ ಅವರ ಜೀವನ ಕಷ್ಟದಿಂದಲೇ ಕೂಡಿತ್ತು. ಆದರೆ ಮಕ್ಕಳ ಶ್ರೇಯೋಭಿವೃದ್ಧಿ ಕನಸು ಕಂಡ ಅವರು ದಿಟ್ಟತನದಿಂದ ಮಕ್ಕಳ ಕೂಟವನ್ನು ಸ್ಥಾಪನೆ ಮಾಡಿದ್ದರು. ಇದೇ ಸಂಸ್ಥೆಯು ಇಂದು ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ಸಂತಸ ತಂದಿದೆ~ ಎಂದು ಹರ್ಷ ವ್ಯಕ್ತಪಡಿಸಿದರು.

`ಕೂಟವು ಬೇಸಿಗೆ ರಜೆಯಲ್ಲಿ ಮಕ್ಕಳಿಗೆ ಕ್ರೀಡೆ ಸೇರಿದಂತೆ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಅವರಲ್ಲಿ ಅಭಿರುಚಿ ಬೆಳೆಸಲು ನೆರವಾಗುತ್ತಿದೆ~ ಎಂದರು. ಇದೇ ಸಂದರ್ಭದಲ್ಲಿ ಕೂಟದ ಮೈದಾನದ ಆರ್.ಕಲ್ಯಾಣಮ್ಮ ಅವರ ಪುತ್ಥಳಿಅನಾವರಣ ಮಾಡಲಾಯಿತು. ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಮಹೇಶ್ ತೆಂಗಿನಕಾಯಿ, ಪಾಲಿಕೆ ಸದಸ್ಯ ಬಿ.ವಿ.ಗಣೇಶ್, ಕೂಟದ ಅಧ್ಯಕ್ಷ ಟಿ.ವಿ.ಮಾರುತಿ ಇತರರು ಉಪಸ್ಥಿತರಿದ್ದರು.

ಮೇಲ್ಸೇತುವೆ ವಿನ್ಯಾಸ ಬದಲಾಯಿಸಲು ಚಿಂತನೆ
`ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪ ನಿರ್ಮಿಸಲಾಗುತ್ತಿರುವ ಮೇಲ್ಸೇತುವೆಯಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಅದರ ವಿನ್ಯಾಸವನ್ನು ಬದಲಾಯಿಸುವ ಚಿಂತನೆ ನಡೆದಿದೆ~ ಎಂದು ಮೇಯರ್ ಡಿ.ವೆಂಕಟೇಶಮೂರ್ತಿ ಸ್ಪಷ್ಟಪಡಿಸಿದರು.
ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪ ನಿರ್ಮಿಸಲಾಗುತ್ತಿರುವ ಮೇಲ್ಸೇತುವೆಯ ಮೇಲೆ ವೃಷಭಾವತಿ ಕಾಲುವೆಯ ನೀರು ಹರಿಯುವ ಸಾಧ್ಯತೆಯಿದೆ. ಹಾಗಾಗಿ ಕೊನೆಯ ಹಂತದ ಮೇಲ್ಸೇತುವೆಯ ವಿನ್ಯಾಸವನ್ನು ಬದಲಿಸಲಾಗುವುದು~ ಎಂದು ಪ್ರತಿಕ್ರಿಯಿಸಿದರು.

`ಶನಿವಾರ ರಾತ್ರಿ ಸುರಿದ ಮಳೆಗೆ ಕೆಲವೆಡೆ ಮರಗಳು ಉರುಳಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಈ ಬಗ್ಗೆ ನಗರ ಸಂಚಾರ ನಡೆಸಿ ಹಲವೆಡೆ ಪರಿಶೀಲನೆ ನಡೆಸಿದ್ದೇನೆ. ಕರ್ತವ್ಯಕ್ಕೆ ಹಾಜರಾಗದೇ ಇರುವ ಪಾಲಿಕೆಯ ಎಂಜಿನಿಯರ್‌ಗಳನ್ನು ಅಮಾನತು ಮಾಡಲು ಆದೇಶ ನೀಡಲಾಗಿದೆ. ಇನ್ನು ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ನೀರು ನುಗ್ಗದಂತೆ ವ್ಯವಸ್ಥೆ ಮಾಡಲಾಗಿದೆ~ ಎಂದು ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT