ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಇಲ್ಲವೆ ಪಟ್ಟಿಯಿಂದ ಹೆಸರು ಕೈಬಿಡಲು ಕೋರಿ ನಮೂನೆ-6, 7, 8 ,8ಎ ಅರ್ಜಿಗಳನ್ನು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸ್ವೀಕರಿಸಲಾಗುತ್ತದೆ.
ಈ ಸೇವೆಗೆ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನಿಲ್ಕುಮಾರ್ ಝಾ ರಾಜಾಜಿನಗರ ವಿಧಾನಸಭಾ ಕ್ಷೇತ್ರದ 2ನೇ ಬ್ಲಾಕ್, ಬೆಂಗಳೂರು ಒನ್ ಕೇಂದ್ರದಲ್ಲಿ ಭಾನುವಾರ ಚಾಲನೆ ನೀಡಿದರು.