ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಷಿ ವರದಿ ಆಶಯಕ್ಕೆ ಧಕ್ಕೆ; ಪ್ರತಿಭಟನೆ

‘ಕರ್ನಾಟಕ ವಿಕಾಸ ರಂಗ’ ನೇತೃತ್ವದಲ್ಲಿ ಧ್ವನಿ ಎತ್ತಿದ ಹೋರಾಟಗಾರರು
Last Updated 14 ಜೂನ್ 2019, 20:12 IST
ಅಕ್ಷರ ಗಾತ್ರ

ಬೆಂಗಳೂರು: ‘ಕನ್ನಡಿಗರ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಸರೋಜಿನಿ ಮಹಿಷಿ ಅವರು ನೀಡಿರುವವರದಿಯ ಮೂಲ ಆಶಯಕ್ಕೆ ರಾಜ್ಯ ಸರ್ಕಾರ ಧಕ್ಕೆ ತಂದಿದೆ’ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರರು ನಗರದ ಪುರಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

‘ಕರ್ನಾಟಕ ವಿಕಾಸ ರಂಗ’ ನೇತೃತ್ವದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸಂಶೋಧಕ ಎಂ. ಚಿದಾನಂದ ಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್, ಬಿ.ಟಿ.ಲಲಿತಾ ನಾಯಕ್ ಮೊದಲಾದವರು ಪಾಲ್ಗೊಂಡಿದ್ದರು.

‘ವರದಿಯನ್ನೇ ಬುಡಮೇಲು ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದ್ದು ಖಂಡನೀಯ. ಅಧಿಸೂಚನೆಯನ್ನು ಕೂಡಲೇ ಹಿಂಪಡೆದು ಮೂಲ ಆಶಯಕ್ಕೆ ತಕ್ಕಂತೆ ಹೊಸದಾಗಿ ಅಧಿಸೂಚನೆ ಹೊರಡಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

‘ಕನ್ನಡಿಗರು ಎಂದು ಗುರುತಿಸಲು ಕನಿಷ್ಠ 10ನೇ ತರಗತಿಯವರೆಗೆ ಕನ್ನಡವನ್ನು ವಿಷಯವಾಗಿ ಅಭ್ಯಾಸ ಮಾಡಿರಬೇಕು. ಕರ್ನಾಟಕದಲ್ಲಿ 15 ವರ್ಷ ಕಡ್ಡಾಯವಾಗಿ ನೆಲೆಸಿರಬೇಕು ಎಂಬ ಅಂಶ ವರದಿಯಲ್ಲಿದೆ. ಇದನ್ನು ಬದಲಾಯಿಸಿ ಬೇಡವಾದ ಅಂಶಗಳನ್ನು ಅಧಿಸೂಚನೆಯಲ್ಲಿ ಸೇರಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT