ಕೆಂಗೇರಿ: `ಪ್ರಕೃತಿಯಿಂದ ನಮ್ಮ ಜೀವನೋಪಾಯಕ್ಕೆ ಅಗತ್ಯವಾದ ಎಲ್ಲ ಸೌಲಭ್ಯಗಳು ದೊರೆಯುತ್ತಿದ್ದರೂ ಪರಿಸರವನ್ನು ವಿಕೃತಗೊಳಿಸಿ ಕಳಾಹೀನ ಬದುಕನ್ನು ನಡೆಸುತ್ತಿದ್ದೇವೆ~ ಎಂದು ರಂಗಭೂಮಿ ಕಲಾವಿದ ಮಾಸ್ಟರ್ ಹಿರಣ್ಣಯ್ಯ ವಿಷಾದಿಸಿದರು.

ಕೆಂಗೇರಿ ಉಪನಗರದ ಗಾಯಿತ್ರಿ ಮಂದಿರದಲ್ಲಿ ಬ್ರಾಹ್ಮಣ ಸಭಾ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

`ಮನುಷ್ಯ ದುರಾಸೆಯಿಂದ ಪರಿಸರ ಸಂಪತ್ತನ್ನು ಲೂಟಿ ಮಾಡಿ ಪ್ರಕೃತಿಗೆ ಧಕ್ಕೆ ಉಂಟು ಮಾಡುತ್ತಿದ್ದಾನೆ. ಯಾರೋ ಮಾಡಿದ ತಪ್ಪಿಗೆ ಎಲ್ಲರೂ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಈಗಲೇ ಎಚ್ಚೆತ್ತುಕೊಂಡು ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು~ ಎಂದರು.

ಪ್ರೊ. ಆರ್.ಕೆ.ಪ್ರಹ್ಲಾದ್,ಬ್ರಾಹ್ಮಣ ಸಭಾ ಅಧ್ಯಕ್ಷ ಎಚ್.ಎಸ್. ಸುಧೀಂದ್ರ ಕುಮಾರ್, ಕಾರ್ಯದರ್ಶಿ ಸುಧೀಂದ್ರ ರಾವ್, ಪ್ರೊ. ಶಂಕರ್ ನಾರಾಯಣ, ಕೆ.ಎಸ್.ನಾಗರಾಜ್, ಮೇಘನಾ ಇತರರು ಹಾಜರಿದ್ದರು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ 60 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.