ಕೃಷ್ಣರಾಜಪುರ: ಕಲ್ಕೆರೆ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ `ಕಲ್ಯಾಣಿ~ಯಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿವೆ.`ಕಲ್ಯಾಣಿ~ ಮಧ್ಯದಲ್ಲಿ ತೆಪ್ಪ ನಿರ್ಮಿಸಿ, ಅಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದೇ ಮೀನುಗಳ ಸಾವಿಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಪಾಲಿಕೆ ಜಂಟಿ ಆಯುಕ್ತರು ಮತ್ತು ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದಿರುವ ಬಿಬಿಎಂಪಿ ಸದಸ್ಯ ವೀರಣ್ಣ, `ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ತೆಪ್ಪಕ್ಕೆ ಬಳಸಿರುವ ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಬೇಕು~ ಎಂದು ಒತ್ತಾಯಿಸಿದ್ದಾರೆ.