ಯಲಹಂಕ: ಕೇಂದ್ರದ ಯುಪಿಎ ಸರ್ಕಾರವು ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ, ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಇಲ್ಲಿನ ಪೊಲೀಸ್ ಠಾಣೆ ವೃತ್ತದಲ್ಲಿ ಶುಕ್ರವಾರ `ಜೈಲ್ ಭರೋ~ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಸ್.ಆರ್.ವಿಶ್ವನಾಥ್, `ಕೇಂದ್ರದಲ್ಲಿ ಯುಪಿಎ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆಯನ್ನು ಮತ್ತೆ ಏರಿಕೆ ಮಾಡುವ ಹುನ್ನಾರ ನಡೆಯುತ್ತಿದ್ದು, ಜಸಾಮಾನ್ಯರ ಮೇಲೆ ತೀವ್ರ ಬಿದ್ದಿದೆ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ~ ಎಂದರು.

ಕೆಲಕಾಲ ರಸ್ತೆತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆಗೊಳಿಸಿದರು. ಬಿಬಿಎಂಪಿ ಸದಸ್ಯರಾದ ಎಂ.ಮುನಿರಾಜು ವೈ.ಎನ್.ಅಶ್ವತ್ಥ್, ಬಿಜೆಪಿ ಮುಖಂಡರಾದ ಕೆ.ಎಂ.ಮಾರೇಗೌಡ, ಜಯಣ್ಣ, ರಾಜಣ್ಣ, ಡಾ.ಶಶಿಕುಮಾರ್, ಕೆ.ವಿ.ರವಿಶಂಕರ್ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.