ಬೆಂಗಳೂರು: ‘ಹೊಸಪೇಟೆಯ ಗೃಹರಕ್ಷಕ ದಳದ ಕಚೇರಿಯಲ್ಲಿ ಯುವ ಬ್ರಿಗೇಡ್‌ನ ತಾಲ್ಲೂಕು ಸಂಚಾಲಕ ಚಂದ್ರಶೇಖರ್ ಅವರು ಸಿಬ್ಬಂದಿಗಳಿಗೆ ಉಪನ್ಯಾಸ ಮಾಡಿದ್ದ ಬಗ್ಗೆ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇವೆ’ ಎಂದು ಅಗ್ನಿಶಾಮಕ ಹಾಗೂ ತುರ್ತುಸೇವೆಗಳ ಎಡಿಜಿಪಿ ಸೌಮೇಂದು ಮುಖರ್ಜಿ ತಿಳಿಸಿದರು.

ಈ ಬಗ್ಗೆ ‘ಪ್ರಜಾವಾಣಿ’ ಜತೆ ಮಾತನಾಡಿದ ಅವರು, ‘ಅಪರಾಧ ಹಿನ್ನೆಲೆಯುಳ್ಳ ಜನರಿಂದ ಉಪನ್ಯಾಸ ಕೊಡಿಸಿರುವ ವಿಷಯವ ನನ್ನ ಗಮನಕ್ಕೆ ಬಂದಿದೆ. ಇದೊಂದು ಸೂಕ್ಷ್ಮ ವಿಷಯವಾಗಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ’ ಎಂದರು.

‘ಉಪನ್ಯಾಸ ಛಾಯಾಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಬೆಳಿಗ್ಗೆಯಿಂದಲೇ ಪರಿಶೀಲನೆ ನಡೆಸುತ್ತಿದ್ದೇವೆ. ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ. ಸಂಜೆ ವೇಳೆ ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ತೀರ್ಮಾನಿಸಲಿದ್ದೇವೆ’ ಎಂದರು.

[related]

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.