ಬೆಂಗಳೂರು: `ಯುವ ಶಕ್ತಿ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ದೇಶದ ಸುಸ್ಥಿರ ಅಭಿವೃದ್ಧಿ ಸಾಧ್ಯವಾಗಲಿದೆ~ ಎಂದು ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಆರ್.ವೇಣುಗೋಪಾಲ್ ಅಭಿಪ್ರಾಯಪಟ್ಟರು.

ನಗರದಲ್ಲಿ ಇತ್ತೀಚೆಗೆ ನಡೆದ `ಇಂಟೆಪ್ಸ್ -2012~ ತಾಂತ್ರಿಕ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ಭಾರತ ಕ್ರಿಯಾಶೀಲ ಹಾಗೂ ಬಲಿಷ್ಠ ರಾಷ್ಟ್ರವಾಗಿದ್ದು, ಯುವ ಜನರ ಪ್ರತಿಭೆಯನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ. ವಿದ್ಯಾರ್ಥಿಗಳು ಕೇವಲ ಶಿಕ್ಷಣದ ಪಠ್ಯಕ್ಕಷ್ಟೇ ಸೀಮಿತವಾಗದೇ ಇತರ ಚಟುವಟಿಕೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳಬೇಕು.

ತಂತ್ರಜ್ಞಾನದ ಕೌಶಲಗಳನ್ನು ರೂಢಿಸಿಕೊಂಡರೆ ಉತ್ತಮವಾದ ಉದ್ಯೋಗಾವಕಾಶಗಳು ಯುವ ಜನರಿಗೆ ಲಭ್ಯವಾಗಲಿವೆ~ ಎಂದು ಅವರು ಸಲಹೆ ಮಾಡಿದರು.ಕಾಲೇಜಿನ ಹಿರಿಯ ವಿದ್ಯಾರ್ಥಿ ಗೋಪಿನಾಥ್ ಮಾತನಾಡಿ, ಹೊಸ ಚಿಂತನೆ ಹಾಗೂ ಆವಿಷ್ಕಾರಗಳಿಗೆ ವಿದ್ಯಾರ್ಥಿಗಳು ಮುಂದಾಗಬೇಕು.

ತಮ್ಮ ಸಾಮರ್ಥ್ಯವನ್ನು ಸರಿಯಾಗಿ ಬಳಸಿಕೊಂಡಲ್ಲಿ ದೇಶದ ಅಭಿವೃದ್ಧಿಗೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಿದೆ ಎಂದರು.ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎರಡು ದಿನಗಳ ತಾಂತ್ರಿಕ ಉತ್ಸವದಲ್ಲಿ ಚರ್ಚೆಗಳು ಹಾಗೂ ವಸ್ತು ಪ್ರದರ್ಶನಗಳು ನಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.