ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Last Updated 29 ಜುಲೈ 2014, 20:30 IST
ಅಕ್ಷರ ಗಾತ್ರ

ಹೊಸಕೋಟೆ: ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಖಂಡಿಸಿ ತಾಲ್ಲೂಕು ಶಾಖೆ ಎಸ್.ಎಫ್.ಐ ಹಾಗೂ ಡಿವೈಎಫ್ಐ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಮೆರವಣಿಗೆಯಲ್ಲಿ ಬಂದ ಪ್ರತಿಭಟನಾಕಾರರು ತಾಲ್ಲೂಕು ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.

ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಪ್ರತಿಭಟನಾ­ಕಾರರು ಆರೋಪಿಸಿದರು.

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡುವಲ್ಲಿ ಸುಪ್ರೀಂಕೋರ್ಟ್ ಆದೇಶ­ದಂತೆ ಕಾನೂನು ರೂಪಿಸಬೇಕು, ಪ್ರತ್ಯೇಕ ತ್ವರಿತಗತಿ ನ್ಯಾಯಾ­ಲಯ ಸ್ಥಾಪಿಸಬೇಕು, ಶಾಲಾ ಕಾಲೇಜುಗಳಲ್ಲಿ ಸಮಿತಿ ರಚಿಸ­ಬೇಕು, ಪ್ರತಿ ತಿಂಗಳೂ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಭೆ ನಡೆಸ­ಬೇಕು ಎಂದು ಎಸ್.ಎಫ್.ಐ ಜಿಲ್ಲಾ ಮುಖಂಡ ಎಸ್‌.ವೇಗಾನಂದ ಹೇಳಿದರು. ನಂತರ ತಹಶೀಲ್ದಾರರಿಗೆ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT