ಯಲಹಂಕ: `ಸಮಯಪ್ರಜ್ಞೆಯನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ವಾಸ್ತವವನ್ನು ಅರ್ಥ ಮಾಡಿಕೊಂಡು ವರ್ತಮಾನದಲ್ಲಿ ಬದುಕುವುದನ್ನು ರೂಢಿಸಿಕೊಳ್ಳಬೇಕು' ಎಂದು ಬೇಲಿಮಠದ ಶಿವರುದ್ರ ಸ್ವಾಮೀಜಿ ಹೇಳಿದರು.

ವಿದ್ಯಾರಣ್ಯಪುರ ವೀರಶೈವ ಸೇವಾ ಸಮಿತಿ ವತಿಯಿಂದ ವಿದ್ಯಾರಣ್ಯಪುರದಲ್ಲಿ ಆಯೋಜಿಸಿದ್ದ ಬಸವಣ್ಣ ಅವರ 880ನೇ ಜಯಂತಿ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಬಸವಣ್ಣ ಅವರ ತತ್ವ, ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಸುಂದರವಾದ ಬದುಕು ಕಟ್ಟಿಕೊಳ್ಳಬಹುದು' ಎಂದರು.

ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, `ಗುರು ಬಸವಣ್ಣ, ಅಕ್ಕಮಹಾದೇವಿ, ಕನಕದಾಸ ಅವರಂತಹ ದಾರ್ಶನಿಕರು ನೀಡಿದ ಹಿತವಚನಗಳನ್ನು ಪಾಲಿಸುವಲ್ಲಿ ನಾವು ಎಡವಿದ್ದೇವೆ. ಇದರಿಂದ ಸಮಾಜದ ಆರೋಗ್ಯ ನಿರೀಕ್ಷಿತ ಮಟ್ಟದಲ್ಲಿಲ್ಲ' ಎಂದರು.
ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಬಿಬಿಎಂಪಿ ಸದಸ್ಯರಾದ ನಂದಿನಿ ಕೆ.ಶ್ರೀನಿವಾಸ್, ಇ.ಪಿಳ್ಳಪ್ಪ, ಯಶೋದಮ್ಮ ಇ.ಕೃಷ್ಣಪ್ಪ, ಸಮಿತಿಯ ಅಧ್ಯಕ್ಷ ಬಸವರಾಜ ಕೋಣೆ, ಪ್ರಧಾನ ಕಾರ್ಯದರ್ಶಿ ಎಂ.ಜಿ.ಶರಣಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.