ಬೆಂಗಳೂರು: ಹೃದ್ರೋಗದಿಂದ ಬಳಲುತ್ತಿದ್ದ ರೋಗಿಯೊಬ್ಬರಿಗೆ ಜಯ ದೇವ ಹೃದ್ರೋಗ ಸಂಸ್ಥೆಯ ವೈದ್ಯರು ನಡೆಸಿದ ಬಲೂನ್ ಮೈಟ್ರಲ್ ವಾಲ್ವೋಪ್ಲಾಸ್ಟಿ ಶಸ್ತ್ರಚಿಕಿತ್ಸೆಯ ಇಡೀ ಪ್ರಕ್ರಿಯೆಯನ್ನು ಅಮೆರಿಕದ ಒರ್‌ಲ್ಯಾಂಡೋದಲ್ಲಿ ನಡೆದ ಅಂತರರಾಷ್ಟ್ರೀಯ ಸಮಾವೇಶದಲ್ಲಿ ನೇರ ಪ್ರಸಾರ ಮಾಡಲಾಯಿತು.

ಹೃದಯ ಕವಾಟ ಬೇನೆಯಿಂದ ಬಳಲುತ್ತಿದ್ದ 23 ವರ್ಷದ ಯುವತಿಯೊಬ್ಬರಿಗೆ ಈ ಶಸ್ತ್ರಚಿಕಿತ್ಸೆ ನಡೆಯಿತು. ಒಟ್ಟು ನಲವತ್ತು ನಿಮಿಷಗಳ ಕಾಲ ಶಸ್ತ್ರಚಿಕಿತ್ಸೆಯ ನೇರಪ್ರಸಾರ ಕಾರ್ಯಕ್ರಮ ನಡೆಯಿತು. ಸಮಾವೇಶದಲ್ಲಿ ಪಾಲ್ಗೊಂಡಿದ್ದ ವೈದ್ಯರಿಗೆ ಡಾ. ಮಂಜುನಾಥ್ ಶಸ್ತ್ರಚಿಕಿತ್ಸಾ ಪ್ರಕ್ರಿಯೆಯನ್ನು ವಿವರಿಸಿದರು.

12 ವರ್ಷಗಳ ಹಿಂದೆ ರೋಗಿ ಒಮ್ಮೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇತ್ತೀಚೆಗೆ ಆಕೆಯ ಕವಾಟವು ಅತ್ಯಂತ ಕಿರಿದಾಗಿ ದುಷ್ಪರಿಣಾಮ ಬೀರಿತ್ತು. ಕೆಲವು ಆಸ್ಪತ್ರೆಗಳಲ್ಲಿ ರೋಗಿಗೆ ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಪಟ್ಟು ಕವಾಟ ಬದಲಾವಣೆಗೆ ಸೂಚಿಸಲಾಗಿತ್ತು. ಆದರೆ, ಜಯದೇವ ಆಸ್ಪತ್ರೆಯಲ್ಲಿ ರೋಗಿಗೆ ಬಲೂನ್ ಮೈಟ್ರಲ್ ವಾಲ್ವೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಿ ಉತ್ತಮ ಫಲಿತಾಂಶ ಪಡೆಯಲಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.