ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷುಲ್ಲಕ ವಿಷಯಕ್ಕೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗಲಾಟೆ

Last Updated 21 ನವೆಂಬರ್ 2019, 2:45 IST
ಅಕ್ಷರ ಗಾತ್ರ

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆ ಯಲ್ಲಿ ಕ್ಷುಲ್ಲಕ ವಿಷಯಕ್ಕೆವೈದ್ಯರು ಹಾಗೂ ವೈದ್ಯಾಧಿಕಾರಿಯ ನಡುವೆ ಮಾತಿನ ಚಕಮಕಿ ನಡೆದು, ಪೊಲೀಸ್‌ ಠಾಣೆ ಮೆಟ್ಟಿಲೇರಿದ ಘಟನೆ ಬುಧವಾರ ನಡೆದಿದೆ.

ಆಸ್ಪತ್ರೆಯ ಟ್ರಾಮಾ ಕೇಂದ್ರ ದಲ್ಲಿ ಕಾಯಕಲ್ಪ ಪರಿವೀಕ್ಷಣೆ ಸಂದರ್ಭದಲ್ಲಿ ಡಾ.ಮಧುಸೂದನ್‌ ಎಂಬುವವರು ಆರೋಗ್ಯ ಇಲಾಖೆ ಯಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದೇ ರೀತಿ, ಮಹಿಳಾ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ಕೂಡಾ ಅವರು ನಿಂದಿಸಿದ್ದಾರೆ ಎಂದು ಹೇಳಲಾಗಿದೆ. ಪರಸ್ಪರ ಮಾತುಗಳು ತಾರಕಕ್ಕೇರಿ, ಕೆಲ ಹೊತ್ತು ಆಸ್ಪತ್ರೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಆವೇಶಕ್ಕೆ ಒಳಗಾದ ಮಧು ಸೂದನ್, ಕಂಪ್ಯೂಟರ್‌ ಕೀ ಬೋರ್ಡ್‌ ಒಡೆದು ಹಾಕಿದ್ದಾರೆ ಎಂದು ಸಿಬ್ಬಂದಿ ದೂರಿದ್ದಾರೆ.

ಈ ಬಗ್ಗೆ ವಿ.ವಿ.ಪುರ ಪೊಲೀಸ್ ಠಾಣೆಯಲ್ಲಿ ಅಸೀಮಾ ಎನ್ನುವವರು ದೂರು ದಾಖಲಿಸಿದ್ದು, ಮಧುಸೂದನ್ ಪ್ರತಿ ದೂರು ದಾಖಲಿಸಿದ್ದಾರೆ. ಇಬ್ಬರಿಗೂ ಎಚ್ಚರಿಕೆ ನೀಡಿದ ಪೊಲೀಸರು, ಮುಚ್ಚಳಿಕೆ ಬರೆಸಿಕೊಂಡು ವಾಪಸ್ ಕಳುಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT