ಬೆಂಗಳೂರು: ಬಿಎಂಟಿಸಿ ಬಸ್ಗೆ ಹತ್ತುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಕಾವ್ಯಶ್ರೀ (17) ಎಂಬ ವಿದ್ಯಾರ್ಥಿನಿ ಗಾಯಗೊಂಡಿರುವ ಘಟನೆ ಕನಕಪುರ ಮುಖ್ಯರಸ್ತೆಯ ಕೋಣನಕುಂಟೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಜಯನಗರದ ನ್ಯಾಷನಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿರುವ ಕಾವ್ಯಶ್ರೀ, ಕಾಲೇಜಿಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ.