ಬೆಂಗಳೂರು: `ದೇಶದ ಜನಸಂಖ್ಯೆಗೆ ಅಗತ್ಯವಿರುವಷ್ಟು ವಿದ್ಯುತ್ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ~ ಎಂದು ಕೇಂದ್ರ ಸರ್ಕಾರದ ವಿದ್ಯುತ್ ತರಬೇತಿ ಸಂಸ್ಥೆಯ ನಿರ್ದೇಶಕ ಎಂ.ಎನ್.ಮೂರ್ತಿ ಅಭಿಪ್ರಾಯಪಟ್ಟರು.

ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜು ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ `ವಿದ್ಯುತ್ ಉತ್ಪಾದನೆಯಲ್ಲಿರುವ ಸವಾಲುಗಳು: ಮತ್ತು ವಿತರಣಾ ವ್ಯವಸ್ಥೆ~ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

`ನವೀಕರಿಸಬಹುದಾದ ಸಂಪನ್ಮೂಲವನ್ನು ಸಮಪರ್ಕವಾಗಿ ಬಳಸಿಕೊಂಡರೇ ವಿದ್ಯುತ್ ಉತ್ಪಾದನಾ ವ್ಯವಸ್ಥೆಯಲ್ಲಿ ವಿವಿಧ ಆಯಾಮಗಳನ್ನು ಪಡೆಯಲು ಸಾಧ್ಯವಿದೆ. ಇನ್ನೂ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಹೊಸ ದೃಷ್ಟಿಕೋನವನ್ನು ಬೆಳೆಸಿಕೊಳ್ಳುವ ಅಗತ್ಯವಿದೆ~ ಎಂದರು.

`ಕೆಲವೊಮ್ಮೆ ಸಾಕಷ್ಟು ವಿದ್ಯುತ್ ಉತ್ಪಾದನೆಯಾಗುತ್ತಿದ್ದರೂ, ವಿತರಣಾ ವ್ಯವಸ್ಥೆಯಲ್ಲಿ ಲೋಪವು ಸಹ ವಿದ್ಯುತ್ ಅಭಾವದಂತಹ ಸಮಸ್ಯೆಗಳನ್ನು ಸೃಷ್ಟಿಸಿದೆ. ವಿದ್ಯುತ್ ಉತ್ಪಾದನೆ ಮಾತ್ರವಲ್ಲ ವಿತರಣೆಗೂ ಹೆಚ್ಚಿನ ಗಮನ ಹರಿಸಬೇಕು~ ಎಂದ ಅವರು, ` ವಿದ್ಯುತ್ ಉತ್ಪಾದನಾ ಮತ್ತು ವಿತರಣಾ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಂಶೋಧನೆಗಳು ನಡೆಯಬೇಕು. ಆಗ ಮಾತ್ರ ವ್ಯವಸ್ಥೆ ಸುಧಾರಿಸಲು ಸಾಧ್ಯವಿದೆ~ ಎಂದು ಹೇಳಿದರು.

ಕಾಲೇಜಿನ ಕಾರ್ಯದರ್ಶಿ ಗಾಳಿಸ್ವಾಮಿ, ` ಬೇಸಿಗೆಯಲ್ಲಿ ತಲೆದೋರುವ ವಿದ್ಯುತ್ ಅಭಾವದಂತಹ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವಾಗಿ ಈ ವಿಚಾರ ಸಂಕಿರಣವನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳೆಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು~ ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.