ಬೆಂಗಳೂರು: ನಗರದಲ್ಲಿ ಮುಂಗಾರು ಮಳೆ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ನಿಭಾಯಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗೆಗೆ ಬಿಬಿಎಂಪಿ ಆಯುಕ್ತ ಎಂ. ಲಕ್ಷ್ಮಿನಾರಾಯಣ ಸೋಮವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.

`ಮಳೆಯಿಂದ ಉಂಟಾಗಬಹುದಾದ ಅನಾಹುತಗಳ ತುರ್ತು ನಿವಾರಣೆಗೆ ಪ್ರತಿ ವಾರ್ಡ್‌ನಲ್ಲಿ ಸ್ವಯಂಸೇವಕರ ಪಡೆಯನ್ನು ಕಟ್ಟಬೇಕು. ಅವರನ್ನು ತೊಡಗಿಸಿಕೊಂಡು, ಪರಿಹಾರ ಕಾರ್ಯ ಕೈಗೊಳ್ಳಬೇಕು' ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

`ಹವಾಮಾನ ಇಲಾಖೆಯು ನಗರದಲ್ಲಿ ಹೆಚ್ಚಾಗಿ ಮಳೆಯಾಗುವ ಸಂಭವವಿದೆ ಎಂದು ಸೂಚನೆ ನೀಡಿದ್ದು ಬೃಹತ್ ನೀರುಗಾಲುವೆ ಮತ್ತು ರಸ್ತೆ ಬದಿಯ ಮೋರಿಗಳಲ್ಲಿ ತುಂಬಿಕೊಂಡಿರುವ ಹೂಳನ್ನು ತೆರವುಗೊಳಿಸಲು ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಬೇಕು. ಘನತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು. ಇಲ್ಲದಿದ್ದರೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಅದಕ್ಕೆ ಯಾವುದೇ ಕಾರಣಕ್ಕೂ ಆಸ್ಪದ ನೀಡಬಾರದು' ಎಂದು ಆದೇಶ ನೀಡಿದರು.

`ಅನಾಹುತಗಳು ಉಂಟಾಗಬಹುದಾದ ಸ್ಥಳಗಳನ್ನು ಮೊದಲೇ ಗುರುತಿಸಿ, ಅಲ್ಲಿ ಸ್ವಚ್ಛತೆ ಕಾರ್ಯ ಕೈಗೊಳ್ಳಬೇಕು. ಅದರಂತೆ ರಸ್ತೆಯಲ್ಲಿ ಬಿದ್ದಿರುವ ತ್ಯಾಜ್ಯವನ್ನು ತೆರವುಗೊಳಿಸಬೇಕು. ರಸ್ತೆಬದಿ ಮೋರಿಗಳಲ್ಲಿ ತುಂಬಿರುವ ಹೂಳನ್ನು ನಿರಂತರವಾಗಿ ತೆರವುಗೊಳಿಸಬೇಕು. ಮಳೆ ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸಬೇಕು' ಎಂದು ಸೂಚಿಸಿದರು.

`ಬೆಸ್ಕಾಂ, ಬಿ.ಡಿ.ಎ., ಜಲಮಂಡಳಿ, ಬಿ.ಎಂ.ಆರ್.ಸಿ.ಎಲ್., ಕೆ.ಎಸ್.ಆರ್. ಟಿ.ಸಿ., ಬಿ.ಎಂ.ಟಿ.ಸಿ. ಹಾಗೂ ನಗರದಲ್ಲಿರುವ ಪ್ರಮುಖ ಸರ್ಕಾರಿ ಸಂಸ್ಥೆಗಳು ತಮ್ಮ ವ್ಯಾಪ್ತಿ ಪ್ರದೇಶಗಳಲ್ಲಿ ಆಗಬಹುದಾದ ಅನಾಹುತ ತಪ್ಪಿಸಲು ಕ್ರಮ ವಹಿಸುವಂತೆ ಅಲ್ಲಿಯ ಅಧಿಕಾರಿಗಳಿಗೆ ಸೂಚಿಸಬೇಕು' ಎಂದೂ ಆದೇಶಿಸಿದರು.

`ಈಗಾಗಲೇ ಅಸ್ತಿತ್ವದಲ್ಲಿರುವ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಷ್ಟೊಂದು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಮಿತಿ ರಚಿಸಲು ಸೂಚಿಸಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಪುನರ್ ರಚಿಸುವಂತೆ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ' ಎಂದು ತಿಳಿಸಿದರು.

`ಬಿಬಿಎಂಪಿಯಲ್ಲಿ ಇರುವ ಎಲ್ಲ ನಿಯಂತ್ರಣ ಕೊಠಡಿಗಳನ್ನು ಅಗತ್ಯ ಸಿಬ್ಬಂದಿ, ಸಲಕರಣೆ ಹಾಗೂ ಉಪಕರಣಗಳೊಂದಿಗೆ ಉನ್ನತೀಕರಿಸಬೇಕು ಹಾಗೂ ಮಳೆ ಪರಿಸ್ಥಿತಿ ನಿರ್ವಹಣೆಗೆ ಹೆಚ್ಚುವರಿಯಾಗಿ ಮೂರು ಪ್ರಹರಿ ವಾಹನ ಪಡೆದುಕೊಳ್ಳಬೇಕು. ಮೊಬೈಲ್ ಹಾಗೂ ಇಂಟರ್ನೆಟ್ ಸೇರಿದಂತೆ ತಂತ್ರಜ್ಞಾನದ ನೆರವು ಪಡೆದು ಸಾರ್ವಜನಿಕರಿಗೆ ಆಯಾ ಕ್ಷಣದ ಮಾಹಿತಿ ನೀಡಬೇಕು' ಎಂದು ವಲಯ ಜಂಟಿ ಆಯುಕ್ತರಿಗೆ ಸೂಚಿಸಿದರು.

`ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಗಿಡಗಳನ್ನು ತೆರವುಗೊಳಿಸಲು ಕೂಡಲೇ ಅವುಗಳ ಮಾಲೀಕರಿಗೆ ಎಚ್ಚರಿಕೆ ನೋಟಿಸ್ ಜಾರಿ ಮಾಡಬೇಕು. ನಿವೇಶನ ಸ್ವಚ್ಛಗೊಳಿಸದಿದ್ದಲ್ಲಿ ಸಂಬಂಧಪಟ್ಟ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು ಅಂತಹ ನಿವೇಶನಗಳ ಸ್ವಚ್ಛತೆಗೆ ವ್ಯವಸ್ಥೆ ಮಾಡಿ, ಅದಕ್ಕೆ ತಗುಲಿದ ವೆಚ್ಚವನ್ನು ಮಾಲೀಕರಿಂದ ಆಸ್ತಿ ತೆರಿಗೆ ಜೊತೆ ವಸೂಲಿ ಮಾಡಬೇಕು' ಎಂದು ಆದೇಶ ನೀಡಿದರು.

ಒಣ ತ್ಯಾಜ್ಯ ಘಟಕಗಳ ನಿರ್ವಹಣೆ, ಪೌರ ಕಾರ್ಮಿಕರ ಸಮಸ್ಯೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯನ್ನೂ ಅವರು ನಡೆಸಿದರು.

ತುರ್ತು ಸಹಾಯವಾಣಿ
ಐ.ಪಿ.ಪಿ. ಕೇಂದ್ರ 22660000
ಕೇಂದ್ರ ಕಚೇರಿ 22221188
22975595
22225657
ದಕ್ಷಿಣ ವಲಯ 26566362
22975703
ಪೂರ್ವ ವಲಯ 22975803
ಪಶ್ಚಿಮ ವಲಯ 23561692
23463366
ದಾಸರಹಳ್ಳಿ 28394909
22975904
28393688
ಯಲಹಂಕ 22975936
23636671
ಬೊಮ್ಮನಹಳ್ಳಿ 25735642
25732447
ಮಹದೇವಪುರ 28512300
28512301
ರಾಜರಾಜೇಶ್ವರಿನಗರ 28600954
28601851

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.