ಬೆಂಗಳೂರು: ಪ್ರತಿಭಟನೆ ಮಾಡುತ್ತಿದ್ದ ವೈದ್ಯರ ಮೇಲೆ ಲಖನೌ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಆರೋಪಿಸಿ ರಾಷ್ಟ್ರೀಯ ಸಮಗ್ರ ವೈದ್ಯಕೀಯ ಸಂಘಟನೆ (ಎನ್ಐಎಂಎ) ಕಾರ್ಯಕರ್ತರು ಆಯುಶ್ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ಮಾಡಿದರು.

`ವೇತನ ಪರಿಷ್ಕರಣೆ ಮಾಡುವುದು, ಮೂಲಸೌಕರ್ಯ ಒದಗಿಸುವುದು ಸೇರಿದಂತೆ ಹಲವು ನ್ಯಾಯಯುತ ಬೇಡಿಕೆಗಳನ್ನು ಇಟ್ಟುಕೊಂಡು ಲಖನೌನಲ್ಲಿ ಪ್ರತಿಭಟನೆ ಮಾಡುತ್ತಿದ್ದ ನಮ್ಮ ವೈದ್ಯರ ಮೇಲೆ ಅಲ್ಲಿನ ಪೊಲೀಸರು ಲಾಠಿ ಪ್ರಹಾರ ಮಾಡಿ ದೌರ್ಜನ್ಯ ಎಸಗಿದ್ದಾರೆ. ಇದನ್ನು ಖಂಡಿಸಿ ದೇಶದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ನಗರದ ಧನ್ವಂತರಿ ರಸ್ತೆಯಿಂದ ಜಾಥಾ ಆರಂಭಿಸಿ, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದೇವೆ~ ಎಂದು ಸಂಘಟನೆಯ ಅಧ್ಯಕ್ಷ ಕೆ.ಸಿ.ಬಲ್ಲಾಳ್ ತಿಳಿಸಿದರು. ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಪಾದ್ ಶಾಸ್ತ್ರಿ, ಕಾರ್ಯದರ್ಶಿ ಮಂಜುಳಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.