ಬೆಂಗಳೂರು: ಸರ್ಕಾರಿ ಆಸ್ಪತ್ರೆ ವೈದ್ಯರು ಜನರಿಕ್ ಅಲ್ಲದ ಬೇರೆ ಬ್ರ್ಯಾಂಡ್ಗಳ ಔಷಧ ಖರೀದಿಸಲು ಸೂಚಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯಕ್ತರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಪ್ರಮುಖ ಸರ್ಕಾರಿ ಆಸ್ಪತ್ರೆಗಳಿಗೆ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳ ವೈದ್ಯರು ರೋಗಿಗಳಿಗೆ ಪ್ರತ್ಯೇಕ ಬ್ರ್ಯಾಂಡ್ ಔಷಧಿಗಳನ್ನು ಖರೀದಿಸಲು ಒತ್ತಾಯಿಸುತ್ತಿರುವ ಬಗ್ಗೆ ದೂರು ಬಂದಿದೆ ಎಂದು ತಿಳಿಸಿದ್ದಾರೆ.
ಸರ್ಕಾರವು ಜನೌಷಧಿ, ಜನಸಂಜೀವಿನಿ ಆಂದೋಲನದಡಿ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಔಷಧಿಗಳನ್ನು ಅತಿ ಕಡಿಮೆ ಬೆಲೆಗೆ ಪೂರೈಸುತ್ತಿದೆ.