ಬೆಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ಇರುವ ರಸ್ತೆಗಳ ಬಗ್ಗೆ ಸಾರ್ವಜನಿಕರ ಮೊಬೈಲ್ ಫೋನ್ಗಳಿಗೆ ಉಚಿತವಾಗಿ ಸಂದೇಶ (ಎಸ್ಎಂಎಸ್) ರವಾನಿಸುವ ಯೋಜನೆಯನ್ನು ನಗರ ಸಂಚಾರ ಪೊಲೀಸರು ಜಾರಿಗೊಳಿಸಿದ್ದಾರೆ.

`ಈ ಯೋಜನೆ ಅನ್ವಯ, ಹೆಚ್ಚು ವಾಹನ ದಟ್ಟಣೆ ಇರುವ ರಸ್ತೆಗಳು ಹಾಗೂ ಸ್ಥಳಗಳ ಬಗ್ಗೆ ಸಾರ್ವಜನಿಕರ ಮೊಬೈಲ್ ಫೋನ್ಗಳಿಗೆ ಆಗಾಗ್ಗೆ ಎಸ್ಎಂಎಸ್ ಕಳುಹಿಸಲಾಗುತ್ತದೆ.

ಇದರಿಂದ ಸಾರ್ವಜನಿಕರು ವಾಹನ ದಟ್ಟಣೆಯಲ್ಲಿ ಸಿಲುಕಿ ತೊಂದರೆ ಅನುಭವಿಸುವುದು ತಪ್ಪಲಿದೆ~ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಡಾ.ಎಂ.ಎ.ಸಲೀಂ `ಪ್ರಜಾವಾಣಿ~ಗೆ ತಿಳಿಸಿದರು.

ಈ ಸೇವೆಯನ್ನು ಪಡೆದುಕೊಳ್ಳಲು ಬಯಸುವ ಸಾರ್ವಜನಿಕರು ತಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಬೇಕು. ಸಾರ್ವಜನಿಕರು ಮೊಬೈಲ್ನಲ್ಲಿ ಒಐಘೆ ಆ ಎಂದು ಟೈಪ್ ಮಾಡಿ 092195 92195 ಸಂಖ್ಯೆಗೆ ಎಸ್ಎಂಎಸ್ ಕಳುಹಿಸಬೇಕು. ಈಗಾಗಲೇ ಈ ಯೋಜನೆ ಜಾರಿಯಲ್ಲಿದ್ದು, ಸುಮಾರು 18 ಸಾವಿರ ಮಂದಿ ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈಗಾಗಲೇ ಮೊಬೈಲ್ ಸಂಖ್ಯೆ ನೋಂದಾಯಿಸಿ ಸೇವೆಯ ಉಪಯೋಗ ಪಡೆಯುತ್ತಿರುವ 18 ಸಾವಿರ ಮಂದಿಯೂ ಈ ಹೊಸ ಸಂಖ್ಯೆಗೆ ಎಸ್ಎಂಎಸ್ ಕಳುಹಿಸಿ ಪುನಃ ನೋಂದಣಿ ಮಾಡಿಕೊಳ್ಳಬೇಕು ಎಂದು ಸಲೀಂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.