ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ’

Last Updated 24 ಜೂನ್ 2017, 19:56 IST
ಅಕ್ಷರ ಗಾತ್ರ

ದಾಬಸ್‌ಪೇಟೆ: ‘ರೈತರು ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಜೀವನಕ್ಕೆ ಅವಶ್ಯವಿರುವ ಹಾಗೂ ಆದಾಯ ತರುವ ಮಿಶ್ರ ಬೆಳೆಗಳನ್ನು ಬೆಳೆಯಬೇಕು’ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿ ಭಾಸ್ಕರ್ ಹೇಳಿದರು.

ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ನಡೆದ ‘ಸಮಗ್ರ ಕೃಷಿ ಅಭಿಯಾನ ಯೋಜನೆಯ ಸಮಾರೋಪ ಸಮಾರಂಭ’ದಲ್ಲಿ ಅವರು ಮಾತನಾಡಿದರು.

‘ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಫಲವತ್ತಾದ ಭೂಮಿ ಕಡಿಮೆ ಆಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ ಮಾತನಾಡಿ, ‘ತಾಲ್ಲೂಕಿನಲ್ಲಿ 700 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ. ಪ್ರತಿ ಹೋಬಳಿಯಲ್ಲಿ ರೈತ ಸಂಪರ್ಕ ಕೇಂದ್ರಗಳನ್ನು ತೆರೆಯಲಾಗಿದೆ. ಅಲ್ಲಿ ರೈತರಿಗೆ ಬೇಕಾದ ಎಲ್ಲ ರೀತಿಯ ಬೀಜಗಳು, ಔಷಧಗಳು ಸಿಗಲಿವೆ. ಕೃಷಿ ಯಂತ್ರಧಾರೆ ಯೋಜನೆಯಡಿ ಯಂತ್ರೋಪಕರಣಗಳು ಬಾಡಿಗೆಗೆ ನೀಡಲಾಗುತ್ತದೆ ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT