ಕೃಷ್ಣರಾಜಪುರ: ಜನಸಾಮಾನ್ಯರ ಸಮಸ್ಯೆ ಪರಿಹರಿಸುವ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಫೆಬ್ರುವರಿಯಲ್ಲಿ ರಾಷ್ಟ್ರವ್ಯಾಪಿ ಮುಷ್ಕರವನ್ನು ನಡೆಸಿದ್ದವು. ಮುಷ್ಕರ ಗಂಭೀರತೆಯನ್ನು ಗಮನಿಸಿದ ಕೇಂದ್ರ ಸರ್ಕಾರ ರಚಿಸಿದ ನಾಲ್ಕು ಕೇಂದ್ರ ಸಚಿವರ ಸಮಿತಿಯು ಕೇವಲ ಕಾಲಹರಣ ತಂತ್ರವಾಗಿದೆ ಎಂದು ಆರೋಪಿಸಿ ಸಿ.ಐ.ಟಿ.ಯು ಸದಸ್ಯರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ಕಾರ್ಮಿಕರ ಭವಿಷ್ಯ ನಿಧಿ ಕಚೇರಿಯ ಎದುರು ಘೋಷಣೆ ಹಾಕಿದ ಸದಸ್ಯರು, ಸರ್ಕಾರದ ನಿರ್ಲಕ್ಷ್ಯಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಬೆಲೆ ನಿಯಂತ್ರಣ, ಕಾರ್ಮಿಕರಿಗೆ ಕನಿಷ್ಠ ವೇತನ ಸೇರಿದಂತೆ ಹತ್ತು ಪ್ರಮುಖ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಗಿದ್ದು, ಇದನ್ನು ಪರಿಹರಿಸುವಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಿಲ್ಲ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎನ್.ಗೋಪಾಲಗೌಡ ದೂರಿದರು.

ಭವಿಷ್ಯ ನಿಧಿ ರಕ್ಷಣೆ ಮತ್ತು ವಿತರಣೆ ಪಾರದರ್ಶಕವಾಗಿರಬೇಕು. ಕಾರ್ಮಿಕರಿಗೆ ಹಣ ವಿತರಣೆ ಕಾಲಮಿತಿಯೊಳಗೆ ಆಗಬೇಕು. ಭವಿಷ್ಯ ನಿಧಿ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಬೇಕು ಎಂದು ಪ್ರಧಾನ ಕಾರ್ಯದರ್ಶಿ ಪಿ.ಮುನಿರಾಜು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.