ಹೊಸಕೋಟೆ: `ಸರ್ಕಾರಿ ಶಾಲೆಗಳಲ್ಲಿ ಸೌಕರ್ಯ ಅಭಿವೃದ್ಧಿಗೆ ದಾನಿಗಳು ಸಂಘ- ಸಂಸ್ಥೆ ನೆರವು ನೀಡಬೇಕು' ಎಂದು ಶಾಸಕ ಎನ್.ನಾಗರಾಜು ಮನವಿ ಮಾಡಿದರು.

ಬೆಂಗಳೂರಿನ ಡೆಲ್ ಸಂಸ್ಥೆ ವತಿಯಿಂದ ಪಟ್ಟಣದ ಬಾಲಕರ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.

`ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಹಣ ವೆಚ್ಚ ಮಾಡುತ್ತಿದ್ದರೂ ಮೂಲಸೌಕರ್ಯ ಕೊರತೆ ಸಂಪೂರ್ಣ ನೀಗಿಲ್ಲ' ಎಂದು ಆತಂಕ ವ್ಯಕ್ತಪಡಿಸಿದರು. `ಮಕ್ಕಳಿಗೆ ಆಂಗ್ಲ ಭಾಷೆ ಕಲಿಕೆ ಅವಶ್ಯಕತೆಯಿದ್ದು ಸರ್ಕಾರಿ ಶಾಲೆಗಳಲ್ಲಿ ತರಬೇತಿ ಕೊಡಬೇಕಿದೆ' ಎಂದು ಅವರು ಅಭಿಪ್ರಾಯಪಟ್ಟರು. ವಕೀಲ ಎಚ್.ವಿ. ರಾಮಚಂದ್ರಪ್ಪ, ಮುಖ್ಯ ಶಿಕ್ಷಕ ಕೆ.ರಮೇಶ್, ಡೆಲ್ ಸಂಸ್ಥೆ ಅಧಿಕಾರಿಗಳಾದ ಶ್ಯಾಮಲಾ, ಪ್ರಶಾಂತ್ ಉಪಸ್ಥಿತರಿದ್ದರು. 620 ಮಕ್ಕಳಿಗೆ ಸೌಲಭ್ಯ ವಿತರಿಸಲಾಯಿತು.

ಉದ್ಘಾಟನೆ: ತಾಲ್ಲೂಕಿನ ದೇವಶೆಟ್ಟಿಹಳ್ಳಿ ಗ್ರಾಮದ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನೂತನ ಗೋಪುರ, ಗಣಪತಿ, ನವಗ್ರಹಗಳ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕ ಸಮಾರಂಭ ಶನಿವಾರ ನಡೆಯಿತು. ಶಾಸಕ ಎನ್.ನಾಗರಾಜು, ದಾನಿ ಕೃಷ್ಣಪ್ಪ ಮತ್ತಿತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.