ಬೆಂಗಳೂರು: ನಗರದ ಸ್ವಚ್ಛತೆ ಹಾಗೂ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿರುವ ನಗರದ ಖಾಸಗಿ ಎಫ್.ಎಂ ವಾಹಿನಿ ಹಾಗೂ ಸ್ವಯಂಸೇವಕರ ತಂಡ, ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡಿದವರಿಗೆ ಪ್ಲಾಸ್ಟಿಕ್ ಹೂವಿನ ಹಾರ ಹಾಕಿ, ಆ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸುವ ಅಭಿಯಾನ ಹಮ್ಮಿಕೊಂಡಿದೆ.

ಎಂಟು ಮಂದಿ ಸ್ವಯಂಸೇವಕರು ಒಂದು ವಾಹನದಲ್ಲಿ ನಗರದ ರಸ್ತೆಗಳಲ್ಲಿ ತಿರುಗಾಟ ನಡೆಸುತ್ತಾರೆ. ರಸ್ತೆ ಬದಿ, ವಾಹನ ನಿಲುಗಡೆ ಪ್ರದೇಶ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತ ವಿಸರ್ಜನೆ ಮಾಡುವ ವ್ಯಕ್ತಿಗಳನ್ನು ಕಂಡ ಕೂಡಲೇ ವಾಹನ ನಿಲ್ಲಿಸಿ ಬಂದು ಅವರಿಗೆ ಪ್ಲಾಸ್ಟಿಕ್ ಹೂವಿನ ಹಾರ ಹಾಕುತ್ತಾರೆ. ಈ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸುತ್ತಾರೆ.

‘ಡಿ.1ರಿಂದ ಈ ಅಭಿಯಾನ ಆರಂಭಿಸಲಾಗಿದೆ. ಜನವರಿ ಮೊದಲ ವಾರದವರೆಗೆ ಅಭಿಯಾನ ನಡೆಯಲಿದೆ. ನಗರದ ಸ್ವಚ್ಛತೆ ಹಾಗೂ ನೈರ್ಮಲ್ಯದ ಮಹತ್ವದ ಬಗ್ಗೆ ಅರಿವು ಮೂಡಿಸಲು ಈ ಅಭಿಯಾನ ನಡೆಸಲಾಗುತ್ತಿದೆ’ ಎಂದು ತಂಡದ ಯಶವಂತ್ ರಾಜ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.